ಕೋಮಲ್ ಕುಮಾರ್ ನಾಯಕನಾಗಿ ನಟಿಸುತ್ತಿರುವ ರೋಲೆಕ್ಸ್ ಸಿನಿಮಾವನ್ನು ಶ್ರೀನಿವಾಸ್ ಸಿ ಮಂಡ್ಯ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಕೋಮಲ್‌ಗೆ ಜೋಡಿಯಾಗಿ ಸೋನಲ್ ಮೊಂಟೆರಿಯೋ ಅಭಿನಯಿಸುತ್ತಿದ್ದು, ಉಳಿದಂತೆ ರಂಗಾಯಣ ರಘು, ಶೋಭರಾಜ್, ಅರವಿಂದ್, ಅಪೂರ್ವ ಸೇರಿದಂತೆ ಅನೇಕರು ನಟಿಸಿದ್ದಾರೆ.
ಫೀನಿಕ್ಸ್ ಎಂಟರ್‌ಟೈನ್ಮೆಂಟ್ ಬ್ಯಾನರ್ ಅಡಿ ಅನಿಲ್ ಕುಮಾರ್ ಎಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಾಕೇಶ್ ಸಿ ತಿಲಕ್ ಛಾಯಾಗ್ರಹಣ, ಜೆಸ್ಸಿ ಗಿಫ್ಟ್ ಸಂಗೀತ ಹಾಗೂ ಅರವಿಂದ್ ರಾಜ್ ಸಂಕಲನ ಸಿನಿಮಾಗಿದೆ.