'ರಾನಿ' ಸಿನಿಮಾವನ್ನು ಗುರುತೇಜ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಕನ್ನಡತಿ ಧಾರಾವಾಹಿ ಖ್ಯಾತಿಯ ಕಿರಣ್ ರಾಜ್ ನಾಯಕನಾಗಿ ನಟಿಸಿದ್ದಾರೆ. ಇವರ ಜೊತೆ ರವಿಶಂಕರ್, ಮೈಕೋ ನಾಗರಾಜ್, ನಾಗತಿಹಳ್ಳಿ ಚಂದ್ರಶೇಖರ್, ಬಿ ಸುರೇಶ್, ಉಗ್ರಂ ಮಂಜು, ಉಗ್ರಂ ರವಿ, ಧರ್ಮಣ್ಣ, ಸೂರ್ಯ ಕುಂದಾಪುರ, ಗಿರೀಶ್ ಹೆಗ್ಡೆ, ಪೃಥ್ವಿರಾಜ್, ಯಶ್ ಶೆಟ್ಟಿ, ಉಮೇಶ್, ಸುಜಯ್ ಶಾಸ್ತ್ರಿ, ಲಕ್ಷ್ಮಿ ಸಿದ್ದಯ್ಯ, ಸಂದೀಪ್ ಮಲಾನಿ, ಅನಿಲ್, ಧರ್ಮೆಂದ್ರ ಆರಸ್, ಮನಮೋಹನ್ ರೈ ಮುಂತಾದವರು ತಾರಾಗಣದಲ್ಲಿದ್ದಾರೆ. ಪ್ರಮೋದ್ ಮರವಂತೆ ಈ ಸಿನಿಮಾದ ನಾಲ್ಕು ಹಾಡುಗಳನ್ನು ರಚಿಸಿದ್ದು, ಮಣಿಕಾಂತ್ ಕದ್ರಿ ಟ್ಯೂನ್ ಹಾಕಿದ್ದಾರೆ.
ಬಿಡುಗಡೆ: 'ರಾನಿ' ಸಿನಿಮಾ 2024ರ ಸೆಪ್ಟಂಬರ್ 12ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.