ರಾಯಲ್ ಸಿನಿಮಾವನ್ನು ದಿನಕರ್ ತೂಗುದೀಪ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ವಿರಾಟ್ ನಾಯಕನಾಗಿ ಹಾಗೂ ಸಂಜನಾ ಆನಂದ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಅಚ್ಯುತ್ ಕುಮಾರ್, ಛಾಯಾ ಸಿಂಗ್, ರಂಗಯಣ ರಘು, ರವಿ ಭಟ್, ರಘು ಮುಖರ್ಜಿ, ಪ್ರಮೋದ್ ಶೆಟ್ಟಿ ಮುಂತಾದವರು ತಾರಾಗಣದಲ್ಲಿದ್ದಾರೆ. ಸಂಕೇತ್ ಛಾಯಾಗ್ರಹಣ ಹಾಗೂ ಚರಣ್ ರಾಜ್ ಸಂಗೀತ ನಿರ್ದೇಶನ ಸಿನಿಮಾಗಿದೆ. ಜಯಣ್ಣ ಹಾಗೂ ಬೋಗೇಂದ್ರ ಈ ಸಿನಿಮಾ ಜಯಣ್ಣ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.
ದಿನಕರ್ ತೂಗುದೀಪ್ ತೂಗುದೀಪ್ ನಿರ್ದೇಶನದ ರಾಯಲ್ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ನಟಿಸಬೇಕಿತ್ತು. ಆದರೆ, ಈ ಸಿನಿಮ್ಮಾ ಸೆಟ್ಟೇರುವುದಕ್ಕೂ ಮುನ್ನ ಅಪ್ಪು ಬಾರದ ಲೋಕಕ್ಕೆ ಪಯಣ ಬೆಳಸಿದರು. ಇದೀಗ ಪುನೀತ್ ರಾಜ್‌ಕುಮಾರ್‌ಗಾಗಿ ದಿನಕರ್ ಮಾಡಿದ್ದ ಕಥೆ ಬೇರೆ? ವಿರಾಟ್ ಮಾಡುತ್ತಿರುವ 'ರಾಯಲ್' ಕಥೆ ಬೇರೆ ಎಂದು ಚಿತ್ರತಂಡದಿಂದ ಮಾಹಿತಿ ನೀಡಿದೆ.
ಬಿಡುಗಡೆ: ರಾಯಲ್ ಸಿನಿಮಾ 2025ರ ಜನವರಿ24ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.