ರುಧೀರಂ ಸಿನಿಮಾವನ್ನು ಜಿಶೋ ಲೋನ್ ಆಂಟನಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿರಾಜ್ ಬಿ ಶೆಟ್ಟಿ ನಾಯಕನಾಗಿ ನಟಿಸಿದ್ದು, ಅಪರ್ಣಾ ಬಾಲಮುರಳಿ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ರಮೇಶ್ ವರ್ಮಾ ಸಿಕೆ, ಕುಮಾರ ದಾಸ್ ಟಿಎನ್, ಪಿ.ಕೆ ಬಾಬು, ಉಮಾ ಕೆ.ಪಿ ಮುಂತಾದವರು ನಟಿಸಿದ್ದಾರೆ. ಈ ಚಿತ್ರವನ್ನು ರೈಸಿಂಗ್ ಸನ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ವಿ.ಎಸ್.ಲಾಲನ್ ನಿರ್ಮಾಣ ಮಾಡಿದ್ದಾರೆ. ರಾಜ್ ಬಿ ಶೆಟ್ಟಿ ಈ ಸಿನಿಮಾದಲ್ಲಿ ಡಾಕ್ಟರ್ ಪಾತ್ರದಲ್ಲಿ ನಟಿಸಿದ್ದಾರೆ. ರುಧೀರಂ ಮೂಲತಃ ಮಲಯಾಳಂ ಸಿನಿಮಾವಾಗಿದ್ದು, ಕನ್ನಡದಲ್ಲಿಯೂ ಬಿಡುಗಡೆ ಆಗಲಿದೆ.