ರಮ್ಮಿ ಆಟ ಸಿನಿಮಾವನ್ನು ಉಮರ್ ಷರೀಫ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಸುದ್ದಿ ವಾಹಿನಿಯಲ್ಲಿ ಆಂಕರ್ ಆಗಿ ಕೆಲಸ ಮಾಡಿರುವ ರಾಘವ್ ಸೂರ್ಯ ನಾಯಕನಾಗಿ ನಟಿಸಿದ್ದಾರೆ. ಉಳಿದಂತೆ ವಿನ್ಯಾ ಶೆಟ್ಟಿ, ಸ್ನೇಹರಾವ್, ಅಭಿಗೌಡ, ಶ್ರೀಕರ್, ರೋಷನ್ ಶ್ರೀನಿವಾಸ್, ಪಾವನ ಲಿಂಗಯ್ಯ, ಗಿರೀಶ, ಮೋಹನ್ ಮುಂತಾದವರು ತಾರಾಗಣದಲ್ಲಿದ್ದಾರೆ. ಪ್ರಭು ಎಸ್.ಆರ್ ಸಂಗೀತ ಹಾಗೂ ಕಾರ್ತಿಕ್ ಎಸ್ ಛಾಯಾಗ್ರಹಣ ಚಿತ್ರಕ್ಕಿದೆ. ಎಯ್ಟ್ ಏಂಜಲ್ಸ್ ಸಂಸ್ಥೆ ಅಡಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ.
ಆನ್‌ಲೈನ್ ರಮ್ಮಿ ಆಡುವುದರಿಂದ ಏನೆಲ್ಲ ತೊಂದರೆಗಳಾಗುತ್ತವೆ. ಜನ ಯಾವೆಲ್ಲಾ ರೀತಿ ಮೋಸ ಹೋಗುತ್ತಾರೆ. ಈ ಆಟದಿಂದ ಏನೆಲ್ಲ ಪರಿಣಾಮಗಳಾಗುತ್ತವೆ ಎಂಬ ಕಥೆಯನ್ಬು ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ.
ಬಿಡುಗಡೆ: ರಮ್ಮಿ ಆಟ ಸಿನಿಮಾ 2024ರ ಸೆಪ್ಟಂಬರ್ 20ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.