ಸಂಭವಾಮಿ ಯುಗೇ ಯುಗೇ ಸಿನಿಮಾವನ್ನು ಚೇತನ್ ಚಂದ್ರಶೇಖರ್ ಶೆಟ್ಟಿ ಕಥೆ ಹಾಗೂ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಜಯ್ ಶೆಟ್ಟಿ ನಾಯಕನಾಗಿ ಹಾಗೂ ನಿಶಾ ರಜಪೂತ್ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಪ್ರಮೋದ್ ಶೆಟ್ಟಿ, ಸುಧಾರಾಣಿ, , ಅಶೋಕ್ ಕುಮಾರ್, ಮಧುರ ಗೌಡ, ಅಭಯ್ ಪುನೀತ್, ಬಲ ರಾಜವಾಡಿ, ಅಶ್ವಿನ್ ಹಾಸನ್ ಮುಂತಾದವರು ತಾರಾಗಣದಲ್ಲಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಪೂರಣ್ ಶೆಟ್ಟಿಗಾರ್ ಸಂಗೀತ ಸಂಯೋಜಿಸಿದ್ದಾರೆ.\
ಇದೊಂದು ಕೃಷಿ ಮತ್ತು ರೈತರ ಸಿನಿಮಾ. ತನಗೆ ಆಶ್ರಯ ಕೊಟ್ಟ ಊರಿಗೆ ಏನಾದರೂ ಮಾಡಬೇಕು ಎಂದು ನಾಯಕ ಮುಂದಾಗುತ್ತಾನೆ. ಆ ಹಳ್ಳಿಯ ಪಂಚಾಯ್ತಿ ಅಧ್ಯಕ್ಷನಾಗುತ್ತಾನೆ. ಮುಂದೇನು ಎಂಬುದು ಚಿತ್ರದ ಕಥೆ.