ಸಾರಾಂಶ ಸಿನಿಮಾವನ್ನು ಸೂಯ ವಸಿಷ್ಠ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ದೀಪಕ್ ಸುಬ್ರಮಣ್ಯ ಹಾಗೂ ಶೃತಿ ಹರಿಹರನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಸಿಫ್ ಕ್ಷತ್ರಿಯಾ, ರವಿ ಭಟ್, ರಾಮ್ ಮಂಜುನಾಥ್, ಸತೀಶ್ ಕುಮಾರ್, ಪೃಥ್ವಿ ಬನವಾಸಿ ಮುಂತಾದವರ ತಾರಾಗಣದಲ್ಲಿದ್ದಾರೆ.
ಉದಿತ್ ಹರಿತಾಸ್ ಸಂಗೀತ ನಿರ್ದೇಶನ, ಅಪರಾಜಿತ್ ಹಿನ್ನೆಲೆ ಸಂಗೀತ ಮತ್ತು ಪ್ರದೀಪ್ ನಾಯಕ್ ಸಂಕಲನ ಈ ಚಿತ್ರಕ್ಕಿದೆ. ಅನಂತ್ ಭಾರದ್ವಾಜ್ ಛಾಯಾಗ್ರಾಹಕರಾಗಿದ್ದಾರೆ. ರವಿ ಕಶ್ಯಪ್ ಮತ್ತು ಆರ್.ಕೆ ನಲ್ಲಮ್ ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಮತ್ತು ಕ್ಲಾಪ್ ಬೋರ್ಡ್ ಪ್ರೊಡಕ್ಷನ್ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.
ಬಿಡುಗಡೆ: ಸಾರಾಂಶ ಸಿನಿಮಾ ಫೆಬ್ರವರಿ 16ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.