ಸತ್ಯ ಸನ್ ಆಫ್ ಹರಿಶ್ಚಂದ್ರ ಸಿನಿಮಾವನ್ನು ಸಚಿನ್ ವಾಲಿ ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ನಿರ್ದೇಶನದ ಚೊಚ್ಚಲ ಸಿನಿಮಾ. ಚಿತ್ರದಲ್ಲಿ ನಿರೂಪ್ ಭಂಡಾರಿ ಹಾಗೂ ಸಾಯಿಕುಮಾರ್ ತಂದೆ-ಮಗನ ಪಾತ್ರ ನಿರ್ವಹಿಸುತ್ತಿದ್ದಾರೆ. ಉಳಿದಂತೆ ಬೃಂದಾ ಆಚಾರ್ಯ, ಅಂಕಿತಾ ಅಮರ್, ಸ್ವಾತಿ ಗುರುದತ್, ಎಂ.ಕೆ.ಮಠ, ಚೇತನ್ ದುರ್ಗಾ ಸೇರಿದಂತೆ ಸಾಕಷ್ಟು ಕಲಾವಿದರ ದಂಡಿದೆ. ಅಂಕಿತ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾವನ್ನು ಅಂಕಿತ್ ಸೋನಿಗಾರ ನಿರ್ಮಿಸುತ್ತಿದ್ದಾರೆ. ಸಂದೀಪ್ ವಲ್ಲೂರಿ ಛಾಯಾಗ್ರಹ, ಸಚಿನ್ ಬಸ್ರೂರು ಸಂಗೀತ ಹಾಗೂ ಉಜ್ವಲ್ ಚಂದ್ರ ಸಂಕಲನ ಸಿನಿಮಾಗಿದೆ.
ಫಸ್ಟ್ ಲುಕ್: 2024ರ ಫೆಬ್ರವರಿ 6ರಂದು 'ಸತ್ಯ ಸನ್ ಆಫ್ ಹರಿಶ್ಚಂದ್ರ' ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, 'ನನ್ನ ತಂದೆಯೇ ನನ್ನ ವಿಲನ್' ಎಂಬ ಅಡಿಬರಹವಿದೆ. ಸತ್ಯ ಮತ್ತು ಸುಳ್ಳಿನ ಸಂಘರ್ಷದ ಕಥಾಹಂದರ ಹೊಂದಿದೆ.