ಸಮಂತಾ ಮುಖ್ಯ ಪಾತ್ರದಲ್ಲಿ ಅಭಿನಯಿಸಿರುವ ಶಾಕುಂತಲಂ ಸಿನಿಮಾವನ್ನು ಗುಣಶೇಖರ್ ನಿರ್ದೇಶನ ಮಾಡಿದ್ದಾರೆ. ಸಮಂತಾಗೆ ಜೋಡಿಯಾಗಿ ದೇವ್ ಮೋಹನ್ ಕಾಣಿಸಿಕೊಂಡಿದ್ದಾರೆ. ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಮತ್ತು ಗುಣ ಟೀಮ್ ವಕ್ಸ್ ಬ್ಯಾನರ್ ಅಡಿಯಲ್ಲಿ ದಿಲ್‌ರಾಜು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಇದು ಸಮಂತಾ ಸಿನಿ ಬದುಕಿನ ಮೊದಲ ಪೌರಾಣಿಕ ಸಿನಿಮಾವಾಗಿದ್ದು, ಸಾಕಷ್ಟು ನಿರೀಕ್ಷೆ ಮೂಡಿಸಿದೆ.
ಬಿಡುಗಡೆ: ಶಾಕುಂತಲಂ ಸಿನಿಮಾ ಏಪ್ರಿಲ್ 14ರಂದು ತಮಿಳು, ತೆಲುಗು, ಕನ್ನಡ, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.