ಶಾಖಾಹಾರಿ ಸಿನಿಮಾವನ್ನು ಸಂದೀಪ್ ಸುಂಕದ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ರಂಗಾಯಣ ರಘು ಹಾಗೂ ಗೋಪಾಲ ಕೃಷ್ಣ ದೇಶಪಾಂಡೆ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸುಜಯ್ ಶಾಸ್ತ್ರಿ ಕೂಡ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ತಾರಾಗಣದಲ್ಲಿದ್ದಾರೆ. ವಿಶ್ವಜಿತ್ ರಾವ್ ಛಾಯಾಗ್ರಹಣ ಹಾಗೂ ಮಯೂರ್ ಅಂಬೆಕಲ್ಲು ಸಂಗೀತ ನಿರ್ದೇಶನ ಚಿತ್ರಕ್ಕಿದೆ.
ಕಥೆ: ಶಿವಮೊಗ್ಗದ ತೀರ್ಥಹಳ್ಳಿಯ ಹಳ್ಳಿಯೊಂದರಲ್ಲಿ ನಡೆಯುವ ಈ ಚಿತ್ರವು ಮಲೆನಾಡಿನ ನಿಗೂಢ ಘಟನೆಗಳ ಸುತ್ತ ಸುತ್ತುತ್ತದೆ.
ಬಿಡುಗಡೆ: ಶಾಖಾಹಾರಿ ಸಿನಿಮಾ ಫೆಬ್ರವರಿ 16ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.