ಸೈರನ್ ಸಿನಿಮಾದಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿಯವರ ಮಗ ಪ್ರವೀರ್ ಶೆಟ್ಟಿ ನಾಯಕನಾಗಿ ನಟಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ರಾಜಾ ವೆಂಕಯ್ಯ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಡೆಕ್ಕನ್ ಕೈಂಡ್ ಮೂವಿ ಬ್ಯಾನರ್ ಅಡಿಯಲ್ಲಿ ತಯಾರಾದ ಈ ಚಿತ್ರದಲ್ಲಿ ಲಾಸ್ಯ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಶರತ್ ಲೋಹಿತಾಶ್ವ, ಅಚ್ಯುತ್ ಕುಮಾರ್, ಪವಿತ್ರ ಲೋಕೇಶ್, ಸ್ಪರ್ಶ ರೇಖಾ ಮುಂತಾದವರು ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಭಾರದ್ವಾಜ್ ಅವರ ಸಂಗೀತ ಮತ್ತು ನಾಗೇಶ್ ಆಚಾರ್ಯ ಅವರ ಛಾಯಾಗ್ರಹಣವಿದೆ.
ಬಿಡುಗಡೆ: ಸೈರನ್ ಚಿತ್ರವು ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಮೇ 26ರಂದು ಬಿಡುಗಡೆಯಾಗಲಿದೆ.