ಸೋಮು ಸೌಂಡ್ ಇಂಜಿನಿಯರ್ ಸಿನಿಮಾವನ್ನು ದುನಿಯಾ ಸೂರಿ ಅವರ ಶಿಷ್ಯ
ಅಭಿ ಬಸವರಾಜ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಕೆಂಡ ಖ್ಯಾತಿಯ
ಶ್ರೇಷ್ಠ ನಾಯಕನಾಗಿ ನಟಿಸಿದ್ದು, ನಾಯಕಿಯಾಗಿ
ನಿಶ್ವಿಕಾ ಪಾಟೀಲ್ ನಟಿಸಿದ್ದಾರೆ. ಉಳಿದಂತೆ ಜಹಾಂಗೀರ್, ಅಪೂರ್ವ, ಯಶ್ ಶೆಟ್ಟಿ, ಗೀರೀಶ್ ಜಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚರಣ್ ರಾಜ್ ಸಂಗೀತಾ ಹಾಗೂ ಶಿವಸೇನಾ ಛಾಯಾಗ್ರಹಣ ಸಿನಿಮಾಗಿದೆ.
ಮಾಸ್ತಿಯವರು ಚಿತ್ರದ ಡೈಲಾಗ್ ಬರೆದಿದ್ದಾರೆ. ವೈದ್ಯರಾಗಿರುವ ಕ್ರಿಸ್ಟೋಪರ್ ಕಿಣಿ ಸೋಮ ಸೌಂಡ್ ಇಂಜಿನಿಯರ್ ಸಿನಿಮಾಗೆ ಹಣ ಹೂಡಿದ್ದಾರೆ. ಇದೊಂದು ಪಕ್ಕಾ ಉತ್ತರ ಕರ್ನಾಟಕ ಭಾಗದ ಕಥೆಯನ್ನು ಹೇಳುವ ಸಿನಿಮಾವಾಗಿದ್ದು, ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಇಳಕಲ್ ಗಂಜಿಹಾಳ ಕೂಡಲಸಂಗಮದ ಭಾಗದಲ್ಲಿ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ.
ಬಿಡುಗಡೆ: ಸೋಮು ಸೌಂಡ್ ಇಂಜಿನಿಯರ್ ಸಿನಿಮಾ ಮಾರ್ಚ್ 15ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು