ಸೌತ್ ಇಂಡಿಯನ್ ಹೀರೋ ಸಿನಿಮಾಗೆ ಫಸ್ಟ್ ರಾಂಕ್ ರಾಜು, ರಾಜು ಕನ್ನಡ ಮೀಡಿಯಂ ಖ್ಯಾತಿಯ ನರೇಶ್ ಕುಮಾರ್ ಹೆಚ್.ಎನ್ ಆಕ್ಷನ್ ಕಟ್ ಹೇಳಿದ್ದಾರೆ. ಸಿನಿಮಾದಲ್ಲಿ ಅವನು ಮತ್ತು ಶ್ರಾವಣಿ ಧಾರಾವಾಹಿ ಖ್ಯಾತಿಯ ಸಾರ್ಥಕ್ ಲಕ್ಕಿ ನಾಯಕಿನಾಗಿ ಹಾಗೂ ಕಾಶೀಮಾ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಯೋಗರಾಜ್ ಭಟ್ ಕೂಡ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಊರ್ವಶಿ ಜಯನ್, ವಿಜಯ್ ಚೆಂಡೂರ್, ಅಶ್ವಿನ್ ರಾವ್ ಪಲ್ಲಕ್ಕಿ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ.