ಸ್ಟಾಕರ್ ಸಿನಿಮಾವನ್ನು ಕಿಶೋರ್ ಭಾರ್ಗವ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಸುಮನ್ ನಗರ್‌ಕರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಮ್, ಐಶ್ವರ್ಯ ನಂಬಿಯರ್, ಉದಯ್ ಆಚಾರ್, ನಮ್ರತಾ ಪಾಟೀಲ್, ಜಿತೆನ್ ಆರೋರಾ, ಭವಾನಿಶಂಕರ್ ದೇಸಾಯಿ ಮುಂತಾದವರು ತಾರಾಗಣದಲ್ಲಿದ್ದಾರೆ. ಚಿತ್ರಕ್ಕೆ ವಿನೋದ್ ರಾಜ್ ಕ್ಯಾಮೆರಾ, ಸ್ಕಂದ ಕಶ್ಯಪ್ ಮ್ಯೂಸಿಕ್, ಸುಧೀರ್ ಪಿಆರ್ ಕಲಾ ನಿರ್ದೇಶನವಿದೆ.