ಮನಸಾಲಜಿ ಸಿನಿಮಾ ಖ್ಯಾತಿಯ ದೀಪಕ್ ಅರಸ್ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ ಶುಗರ್ ಫ್ಯಾಕ್ಟರಿ. ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕನಾಗಿ ಹಾಗೂ ಸೋನಾಲ್ ಮಾಂಟೇರಿಯೋ, ಅದ್ವಿತಿ ಶೆಟ್ಟಿ, ಶಿಲ್ಪಾ ಶೆಟ್ಟಿ ನಾಯಕಿಯರಾಗಿ ನಟಿಸಿದ್ದಾರೆ. ಉಳಿದಂತೆ ರಂಗಾಯಣ ರಘು, ಗೋವಿಂದೇ ಗೌಡ ಸೇರಿದಂತೆ ಹಲವರು ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾವನ್ನು ಆರ್ ಗಿರೀಶ್ ಬಾಲಮಣಿ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದು, ಧನಂಜಯ್ ಬಿ ಛಾಯಾಗ್ರಹಣ ಮತ್ತು ಕೆ ಎಂ ಪ್ರಕಾಶ್ ಸಂಕಲನ ಚಿತ್ರಕ್ಕಿದೆ.
ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಚೇತನ್ ಕುಮಾರ್, ಅರಸು ಅಂತಾರೆ, ಚಂದನ್ ಶೆಟ್ಟಿ ಸಾಹಿತ್ಯದಲ್ಲಿ ಮೂಡಿಬಂದಿರುವ ಈ ಸಿನಿಮಾದ ಹಾಡುಗಳಿಗೆ ಕಬೀರ್ ರಫಿ ಸಂಗೀತ ನೀಡಿದ್ದಾರೆ.
ಬಿಡುಗಡೆ: ಮೂವರು ನಾಯಕಿಯರಿರುವ ಶುಗರ್ ಫ್ಯಾಕ್ಟರಿ ಸಿನಿಮಾ 2023ರ ನವೆಂಬರ್ 24ರಂದು ಬಿಡುಗಡೆ ಆಯಿತು.