ಸ್ವೇಚ್ಛಾ ಸಿನಿಮಾವನ್ನು ಸುರೇಶ್ ರಾಜು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಅನ್ವಿಶ್ ನಾಯಕನಾಗಿ ಹಾಗೂ ಕಿರುತೆರೆ ನಟಿ ಪವಿತ್ರಾ ನಾಯಕ್ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಕೆ.ಆರ್ ಮುರಹರಿ ರೆಡ್ಡಿ, ಸ್ಪಂದನಾ, ಶ್ರೀಲಕ್ಷ್ಮೀ ಮುಂತಾದವರು ತಾರಾಗಣದಲ್ಲಿದ್ದಾರೆ. ಲೋಕಿ ತವಸ್ಯ ಸಂಗೀತ ಹಾಗೂ ಎಸ್ ಸತೀಶ್ ಛಾಯಾಗ್ರಹಣವಿದೆ. ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು, ಲೋಕಿ ತವಸ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಸ್ಟಾರ್ ಮಸ್ತ್ ವಿಕ್ಟರಿ ಆರ್ಟ್ಸ್ ಬ್ಯಾನರ್ ಅಡಿ ಸ್ಟಾರ್ ಮಸ್ತಾನ್ ಹಾಗೂ ಕೆ.ಆರ್ ಮುರಹರಿ ರೆಡ್ಡಿ ಸಿನಿಮಾ ನಿರ್ಮಾಣ ಮಾಡಿದ್ದಾರೆ.
ಬಿಡುಗಡೆ: ಸ್ವೇಚ್ಛಾ ಸಿನಿಮಾ 2025ರ ಜನವರಿ 3ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.