ಟೇಕ್ವಾಂಡೋ ಗರ್ಲ್ ಸಿನಿಮಾವನ್ನು ರವೀಂದ್ರ ವೆಂಶಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಋತು ಸ್ಪರ್ಶ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಸುಮಿತಾ ಪ್ರವೀಣ್, ಪ್ರವೀಣ್ ಭಾನು, ಸಹನಶ್ರೀ, ಪಲ್ಲವಿ ರಾವ್ ಮುಂತಾದವರು ತಾರಾಗಣದಲ್ಲಿದ್ದಾರೆ. ಎಂ.ಎಸ್ ತ್ಯಾಗರಾಜ್ ಸಂಗೀತ, ಪ್ರಮೋದ್ ಭಾರತೀಯ ಛಾಯಾಗ್ರಹಣ ಚಿತ್ರಕ್ಕಿದೆ.
ಇಂದಿನ ಸಮಾಜದಲ್ಲಿ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಹಾಗೂ ಅತ್ಯಾಚಾರದಂತಹ ಘಟನೆಗಳು ನಿರಂತರವಾಗಿ ನಡೆಯುತ್ತಲೇ ಇದೆ. ಇದಕ್ಕೆಲ್ಲಾ ಕಡಿವಾಣ ಹಾಕಲು ಮಕ್ಕಳು ಕರಾಟೆ, ಸೆಲ್ಫ್ ಡಿಫೆನ್ಸ್ ಮಾಡಿಕೊಳ್ಳುವಂತಹ ಟೇಕ್ವಾಂಡೋ ಸಮರ ಕಲೆ ಕಲಿಯಬೇಕಾಗಿರುವುದು ಅನಿವಾರ್ಯ. ಅಂತಹದ್ದೇ ಒಂದು ಸಮರಭ್ಯಾಸ ಕಲೆಯ ಸಿನಿಮಾ 'ಟೇಕ್ವಾಂಡೋ ಗರ್ಲ್'.