ತುಕ್ರ ತನಿಯ ಸಿನಿಮಾವನ್ನು ರಾಘು ಶಿವಮೊಗ್ಗ ನಿರ್ದೇಶನ ಮಾಡುತ್ತಿದ್ದಾರೆ. ಅವರ ನಿರ್ದೇಶನದ ಮೂರನೇ ಚಿತ್ರವಿದು. ತುಕ್ರ ಅಂದರೆ ಶುಕ್ರವಾರ ಹುಟ್ಟಿದವನು. ತನಿಯ ಅಂದರೆ ಶನಿವಾರ ಹುಟ್ಟಿದವನು. ಇದು ಶುಕ್ರವಾರ ಮತ್ತು ಶನಿವಾರ ಹುಟ್ಟಿದ ಇಬ್ಬರು ವ್ಯಕ್ತಿಗಳ ನಡುವಿನ ಕಥೆಯಾಗಿದೆ. ಚಿತ್ರದಲ್ಲಿ ಪ್ರವೀಣ್ ತೇಜ್ ಹಾಗೂ ಅಚ್ಯುತ್ ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದು, ಪದ್ಮಾ ಪಿಕ್ಚರ್ಸ್ ಹಾಗೂ ಗೌರಿ ಟಾಕೀಸ್ ಅಡಿ ನಿರ್ಮಾಣ ಮಾಡಲಾಗುತ್ತಿದೆ.