ವಾಮನ ಸಿನಿಮಾವನ್ನು
ಶಂಕರ್ ರಮಣ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ
ಧನ್ವೀರ್ ನಾಯಕನಾಗಿ ಹಾಗೂ
ರೀಷ್ಮಾ ನಾಣಯ್ಯ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಸಂಪತ್ ರಾಜ್, ಅಚ್ಯುತ್ ಕುಮಾರ್, ತಾರಾ, ಅವಿನಾಶ್, ಆದಿತ್ಯ ಮೆನನ್ ಸೇರಿದಂತೆ ಹಲವರು ಫೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಮಾಡಿದ್ದು, ಮಹೇನ್ ಸಿಂಹ ಛಾಯಾಗ್ರಹಣವಿದೆ. ಚೇತನ್ ಗೌಡ ವಾಮನ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಆಕ್ಷನ್, ರೊಮ್ಯಾನ್ಸ್, ಮದರ್ ಸೆಂಟಿಮೆಂಟ್ ಎಲ್ಲವೂ ಇರುವ ಈ ಸಿನಿಮಾದಲ್ಲಿ ಧನ್ವೀರ್ ಹಳ್ಳಿ ಹೈದನಾಗಿ ಕಾಣಿಸಿಕೊಂಡಿದ್ದಾರೆ.
ಬಿಡುಗಡೆ: ವಾಮನ ಸಿನಿಮಾ 2025ರ ಏಪ್ರಿಲ್ 10ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.