ವೀರ ಚಂದ್ರಹಾಸ ಸಿನಿಮಾವನ್ನು ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ನಿರ್ದೇಶನ ಮಾಡಿದ್ದಾರೆ. ಸಿನಿಮಾ ಇತಿಹಾಸದಲ್ಲಿಯೇ ಇದು ಮೊದಲ ಪ್ರಯತ್ನವಾಗಿದೆ. ಚಿತ್ರದಲ್ಲಿ ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಸಿಕೊಂಡಿದ್ದಾರೆ. ಉಳಿದಂತೆ ಗರುಡ ರಾಮ್, ಶಿಥಿಲ್ ಶೆಟ್ಟಿ, ನಾಗಶ್ರೀ ಜಿ.ಎಸ್, ಪ್ರಸನ್ನ ಶೆಟ್ಟಿಗಾರ್ ಮಂದಾರ್ಥಿ, ಉದಯ್ ಕಡಬಾಳ್, ರವೀಂದ್ರ ದೇವಾಡಿಗ, ನಾಗಶ್ರೀ ಸರ್ವೇಗಾರ್, ಗುಣಶ್ರೀ ಎಂ ನಾಯಕ್, ಶ್ರೀಧರ್ ಕಾಸರಗೋಡು, ಶ್ವೇತಾ ಅರೆಹೊಳೆ, ಪ್ರಜ್ವಲ್ ಕಿನ್ನಾಳ್ ಮುಂತಾದವರು ನಟಿಸಿದ್ದಾರೆ.
ರವಿ ಬಸ್ರೂರು ಸಂಗೀತ, ಕಿರಣ್ ಕುಮಾರ್ ಆರ್ ಛಾಯಾಗ್ರಹಣ ಸಿನಿಮಾಗಿದೆ. ಓಂಕಾರ್ ಮೂವೀಸ್ & ರವಿ ಬಸ್ರೂರು ಮೂವೀಸ್ ಬ್ಯಾನರ್ ಅಡಿಯಲ್ಲಿ ಎನ್.ಎಸ್ ರಾಜ್‌ಕುಮಾರ್ ನಿರ್ಮಾಣ ಮಾಡಿದ್ದಾರೆ.
ಬಿಡುಗಡೆ: ವೀರ ಚಂದ್ರಹಾಸ ಸಿನಿಮಾ 2025ರ ಏಪ್ರಿಲ್ 18ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.