ಎಸ್.ನಾರಾಯಣ್ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಮತ್ತು ಶೃತಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಹೇಮಾ ಚೌಧರಿ, ಸುಧೀರ್, ಶೋಭರಾಜ್ ಮುಂತಾದವರು ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಚಿತ್ರಕ್ಕೆ ರಾಜೇಶ್ ರಾಮನಾಥ್ ಸಂಗೀತ ನೀಡಿದ್ದರು.
ಬೆಳಗಾವಿ ಹತ್ತಿರದ ಹಳ್ಳಿಯಲ್ಲಿ ವಾಸಿಸುವ ಒಬ್ಬ ದೇಶಪ್ರೇಮಿ ಗಾಂಧಿವಾದಿ ನಾಯಕನ ಜೀವನವನ್ನು ಚಿತ್ರ ಹೇಳುತ್ತದೆ. ಸಂಬಂಧಗಳಿಗಿಂತ ದೇಶಪ್ರೇಮವೇ ಹೆಚ್ಚೆಂದು ಉಗ್ರಗ್ರಾಮಿಯಾದ ತನ್ನ ಮಗನನ್ನೇ ಕೊಲ್ಲುವ ಅಪ್ಟಟ ದೇಶಾಭಿಮಾನಿಯ ಕಥೆ ಈ ಚಿತ್ರದಲ್ಲಿದೆ.