ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾವನ್ನು ಅರುಣ್ ಅಮುಕ್ತ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿದ್ದಾರೆ. ಉಳಿದಂತೆ ಮನೋಜ್ ವಿಹಾನ್, ಮನಸ್ವಿ ಮನು, ಭಾವನಾ ಅಪ್ಪು, ಭವ್ಯಾ, ಕಾಕ್ರೋಚ್ ಸುಧೀರ್, ಸುನೀಲ್ ಪುರಾಣಿಕ್, ಅರವಿಂದ್ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ ಮುಂತಾದವರು ತಾರಾಗಣದಲ್ಲಿದ್ದಾರೆ. ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಹಾಗೂ ಕುಮಾರ್ ಗೌಡ ಛಾಯಾಗ್ರಹಣ ಸಿನಿಮಾಗಿದೆ. ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು ಹಾಗೂ ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.