`ವಿಜಯಾನಂದ' ಚಿತ್ರ ವಿ.ಆರ್.ಎಲ್ ಸಾರಿಗೆ ಸಮೂಹ ಸಂಸ್ಥಾಪಕ ಡಾ. ವಿಜಯ್ ಸಂಕೇಶ್ವರ್ ರವರ ಜೀವನಾಧಾರಿತ ಚಿತ್ರವಾಗಿದೆ. ರಿಷಿಕಾ ಶರ್ಮಾ ನಿರ್ದೇಶಿಸಿರುವ ಈ ಚಿತ್ರದಲ್ಲಿ ನಿಹಾಲ್, ವಿಜಯ್ ಸಂಕೇಶ್ವರ ಪಾತ್ರದಲ್ಲಿ ನಟಿಸಿದ್ದಾರೆ. `VRL ಪ್ರೊಡಕ್ಷನ್ಸ್' ಅಡಿಯಲ್ಲಿ ಆನಂದ್ ಸಂಕೇಶ್ವರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರಕ್ಕೆ ಗೋಪಿ ಸುಂದರ್ ಸಂಗೀತವಿದೆ. ಕ್ರೇಜಿ ಸ್ಟಾರ್ ರವಿಚಂದ್ರನ್, ಅನಂತನಾಗ್ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿಯಲ್ಲಿ ಬಿಡುಗಡೆಯಾಗಲಿದೆ.
ಕಥೆ: ಸಾಲ ಮಾಡಿ ಒಂದು ಲಾರಿ ಖರೀದಿಸಿದ ಬಳಿಕ ವಿಜಯ್ ಸಂಕೇಶ್ವರ್ ಆ ಬಳಿಕ ಎದುರಿಸುವ ಸವಾಲುಗಳು, ಅಡೆ-ತಡೆಗಳು, ದೈಹಿಕ, ಮಾನಸಿಕ ಶ್ರಮಗಳು ಪ್ರೇಕ್ಷಕನನ್ನು ತಾಕುತ್ತವೆ. ತಮ್ಮ ಲಾರಿ ಉದ್ಯಮವನ್ನು ಬೆಳೆಸಲು ವಿಜಯ್ ಸಂಕೇಶ್ವರ್ ಮಾಡಿದ ಹೋರಾಟ, ಶ್ರಮದ ಕಥನ ಬಹು ಕುತೂಹಲಕಾರಿಯೂ, ಸ್ಪೂರ್ತಿದಾಯಕವಾಗಿಯೂ ಇದೆ. ಉದ್ಯಮ ಕಟ್ಟುವಲ್ಲಿ ವಿಜಯ್ ಸಂಕೇಶ್ವರ್ ಎದುರಿಸಿದ ಸೋಲುಗಳನ್ನು ಅದನ್ನು ಮೆಟ್ಟಿನಿಂತ ಬಗೆಗಳು ನವೋದ್ಯಮಿಗಳಿಗೆ ಸ್ಪೂರ್ತಿ.