ಯಥಾಭವ ಸಿನಿಮಾವನ್ನು ಗೌತಮ್ ಬಸವರಾಜು ನಿರ್ದೇಶನ ಮಾಡಿದ್ದಾರೆ. ಕೋರ್ಟ್ ಡ್ರಾಮಾ ಕಥೆಯುಳ್ಳ ಈ ಸಿನಿಮಾದಲ್ಲಿ ಪವನ್ ಶಂಕರ್ ಹಾಗೂ ಸಹನಾ ಸುಧಾಕರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಹಿರಿಯ ನಟ ರಾಕ್‌ಲೈನ್ ಸುಧಾಕರ್ ಅವರ ಪುತ್ರ ಗೌತಮ್ ಸುಧಾಕರ್ ಕೂಡ ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ದತ್ತಣ್ಣ, ಬಾಲ ರಾಜವಾಡಿ, ಗೋಪಾಲಕೃಷ್ಣ ದೇಶಪಾಂಡೆ, ಮಾಸ್ಟರ್ ಶಮಂತ್, ನೀನಾಸಂ ಆನಂದ್, ಉಮಾ ಹೆಬ್ಬಾರ್, ಮಹೇಶ್ ಕಾಳಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಸುಜಾತ ಕುಮಾರಿ ಹಾಗೂ ಅನಿಲ್ ಕುಮಾರ್ ಬಿ.ಎನ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ಹರ್ಷ್ ಮಿಶ್ರ ಛಾಯಾಗ್ರಹಣ, ಹರೀಶ್ ಚೌಧರಿ ಸಂಕಲನ, ಕುಂಗ್ಫು ಚಂದ್ರು ಸಾಹಸ ನಿರ್ದೇಶನ, ಸುಚಿತ್ ಚವ್ಹಾಣ್, ನೃತ್ಯ ನಿರ್ದೇಶನ , ಸ್ಮಿತ ಕುಲಕರ್ಣಿ ಕಲಾ ನಿರ್ದೇಶನ ಹಾಗೂ ನಿರ್ಮಾಲ್ ಜೋಶಿ ಅವರ ಸಹ ನಿರ್ದೇಶನವಿದೆ. ಉತ್ಸವ್ ಶ್ರೇಯಸ್ ಈ ಸಿನಿಮಾಗೆ ಸಂಗೀತ ನೀಡಿದ್ದು, ನಾಲ್ಕು ಹಾಡುಗಳಿವೆ.
ಬಿಡುಗಡೆ: ಯಥಾಭವ ಸಿನಿಮಾ 2023ರ ಡಿಸೆಂಬರ್ 1ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.