ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾಗೆ ಶುಭಮಂಗಳ, ನಾಗಿಣಿ, ಕಮಲಿ, ಅಗ್ನಿಸಾಕ್ಷಿ, ಮಧುಬಾಲ ಸೇರಿದಂತೆ ಹಲವು ಸೂಪರ್ ಹಿಟ್ ಧಾರವಾಹಿಗಳನ್ನು ನಿರ್ದೇಶಿಸಿರುವ ಹಯವದನ ಆಕ್ಷನ್ ಕಟ್ ಹೇಳಿದ್ದಾರೆ. ಇದು ಅವರ ಚೊಚ್ಚಲ ಸಿನಿಮಾ. ಚಿತ್ರದಲ್ಲಿ ಕಂಬ್ಳಿಹುಳ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕನಾಗಿ ಹಾಗೂ ಯುವನಟಿ ವೆನ್ಯ ರೈ ನಾಯಕಿಯಾಗಿ ಅಭಿನಯಿಸಿದ್ದಾರೆ.
ಜೊತೆಗೆ ಕೆಟಿಎಂ ಹಾಗೂ ಮೂನ್ ವಾಕ್ ಚಿತ್ರದ ನಟಿ ಸಂಜನಾ ದಾಸ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಶರತ್ ಲೋಹಿತಾಶ್ವ, ಸ್ವಾತಿ, ದಾನಪ್ಪ, ಲಕ್ಷ್ಮೀ ನಾಡಗೌಡ, ದಿನೇಶ್ ಮಂಗಳೂರು, ಬಿರಾದರ್ ಸೇರಿದಂತೆ ಹಲವರು ಫೋಷಕ ಪಾತ್ರದಲ್ಲಿ ನಟಿಸಿದ್ದಾರೆ. ಎಲ್ಲೋ ಜೋಗಪ್ಪ ನಿನ್ನರಮನೆ ಚಿತ್ರಕ್ಕೆ ಶಿವ ಪ್ರಸಾದ್ ಸಂಗೀತ, ನಟರಾಜ್ ಮದ್ದಾಲ ಕ್ಯಾಮೆರಾ ವರ್ಕ್ ಇದೆ.
ಎಲ್ಲೋ ಜೋಗಪ್ಪ ನಿನ್ನರಮನೆ ಒಂದು ಜರ್ನಿಯ ಕಥೆಯಾಗಿದೆ. ತಂದೆ-ಮಗನ ಭಾವನಾತ್ಮಕ ಸಂಬಂಧವೇ ಈ ಚಿತ್ರದ ಹೈಲೈಟ್. ತಂದೆಯ ಮಾಥಿಗೆ ಮುನಿಸಿಕೊಂಡು ಮನೆ ಬಿಟ್ಟು ಹೋಗುವ ಹುಡುಗನ ಕಥೆ ಹೊಂದಿರುವ ಈ ಸಿನಿಮಾದಲ್ಲಿ ಲವ್, ಸೆಂಟಿಮೆಂಟ್, ಕಾಮಿಡಿ ಎಲ್ಲವೂ ಒಳಗೊಂಡಿದೆ.
ಬಿಡುಗಡೆ
ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾ 2025ರ ಫೆಬ್ರವರಿ 21ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.