ದೋಣಿ ಸಾಗಲಿ ಮುಂದೆ ಹೋಗಲಿ..

By Staff

1965ರಲ್ಲಿ ತೆರೆಕಂಡ 'ಮಿಸ್.ಲೀಲಾವತಿ'ಚಿತ್ರದ ಈ ಹಾಡು ಯಾರಿಗೆ ತಾನೇ ಗೊತ್ತಿಲ್ಲ. ಕುವೆಂಪು ಸಾಹಿತ್ಯ, ಆರ್. ಸುದರ್ಶನಂ ಸಂಗೀತದಿಂದ ಹಾಡು ಶ್ರೀಮಂತಗೊಂಡಿದೆ. ಎಸ್. ಜಾನಕಿ ಮತ್ತು ರಾಮಚಂದ್ರರಾವ್ ಕಂಠಸಿರಿಯಿಂದ ಇನ್ನಷ್ಟು ಹೊಳಪು ಪಡೆದಿದೆ. ರಾಜೇಶ್ ಮತ್ತು ಜಯಂತಿ ಅಭಿನಯದಿಂದ ಹಾಡು, ಮನೆಮಾತಾಗಿದೆ. ಈ ಚಿತ್ರದ ಅಭಿನಯಕ್ಕಾಗಿ ಜಯಂತಿ ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ ಕೂಡ ಭಾಜನರಾಗಿದ್ದಾರೆ.

ದೋಣಿ ಸಾಗಲಿ ಮುಂದೆ ಹೋಗಲಿ ದೂರ ತೀರವ ಸೇರಲಿ
ಬೀಸು ಗಾಳಿಗೆ ಬೀಳುತೇಳುವ ತೆರೆಯ ಮೇಗಡೆ ಹಾರಲಿ ||

ಹೊನ್ನಗಿಂಡಿಯ ಹಿಡಿದು ಕೈಯೊಳು ಹೇಮವಾರಿಯ ಚಿಮುಕಿಸೆ
ಮೇಘಮಾಲೆಗೆ ಬಣ್ಣವೀಯುತ ಯಕ್ಷಲೋಕವ ವಿರಚಿಸೆ
ನೋಡಿ ಮೂಡಣದಾ ದಿಗಂತದಿ ಮೂಡುವೆಣ್ಣಿನ ಮೈಸಿರಿ
ರಂಜಿಸುತ್ತಿದೆ ಚೆಲುವೆಯಾಕೆಗೆ ಸುಪ್ರಭಾತವ ಬಯಸಿರಿ ||ದೋಣಿ||

ಕೆರೆಯ ಅಂಚಿನ ಮೇಲೆ ಮಿಂಚಿನ ಹನಿಗಳಂದದಿ ಹಿಮಮಣಿ
ಮಿಂಚುತೀರ್ಪುವು ಮೂಡುತೈತರೆ ಬಾಲಕೋಮಲ ದಿನಮಣಿ
ಹಸಿರು ಜೋಳದ ಹೊಲದ ಗಾಳಿಯು ತೀಡಿ ತಣ್ಣಗೆ ಬರುತಿದೆ
ಹುದುಗಿ ಹಾಡುವ ಮತ್ತ ಕೋಕಿಲ ಮಧುರ ವಾಣಿಯ ತರುತಿದೆ ||ದೋಣಿ||

ದೂರ ಬೆಟ್ಟದ ಮೇಲೆ ತೇಲುವ ಬಿಳಿಯ ಮೋಡವ ನೋಡಿರಿ
ಅದನೆ ಹೋಲುತ ಅಂತೆ ತೇಲುತ ದೋಣಿಯಾಟವನಾಡಿರಿ
ನಾವು ಲೀಲಾಮಾತ್ರ ಜೀವರು ನಮ್ಮ ಜೀವನ ಲೀಲೆಗೆ
ನೆನ್ನೆ ನೆನ್ನೆಗೆ ಇಂದು ಇಂದಿಗೆ ಇರಲಿ ನಾಳೆಯು ನಾಳೆಗೆ ||ದೋಣಿ||

More from Filmibeat

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X