ಈ ಮಣ್ಣು ನಮ್ಮದು ಈ ಗಾಳಿ ನಮ್ಮದು ಜನಪ್ರಿಯ ಗೀತೆ

ಮದರಾಸಿನಲ್ಲಿ ನೆಲೆಸಿದ್ದ ಕನ್ನಡ ಚಲನಚಿತ್ರ ಕಲಾವಿದರೆಲ್ಲಾ ಸೇರಿ ಮದರಾಸ್ ಕನ್ನಡ ಸಂಘವನ್ನು ಸ್ಥಾಪಿಸಿ ಆ ಮೂಲಕ ಕನ್ನಡದ ಚಟುವಟಿಕೆಗಳನ್ನು ಮದರಾಸಿನ ಆಕಾಶವಾಣಿ ಕೇಂದ್ರ ಮೂಲಕ ಬಿತ್ತರಿಸುತ್ತಿದ್ದರು. ಆಗ ರಚನೆಯಾದ ಈ ಹಾಡಿಗೆ ಧ್ವನಿಸಂಯೋಜಿಸಿದವರು ಮದರಾಸ್ ಆರ್ಕೆಸ್ಟ್ರಾ ತಂಡದವರು ಎಂಬುದು ವಿಶೇಷ.
ಈ ಮಣ್ಣು ನಮ್ಮದು
ಈ ಗಾಳಿ ನಮ್ಮದು
ಕಲಕಲನೆ ಹರಿಯುತಿಹ ನೀರು ನಮ್ಮದು
ಕಣಕಣದಲು ಭಾರತೀಯ ರಕ್ತ ನಮ್ಮದು
ನಮ್ಮ ಕಾಯ್ವ ಹಿಮಾಲಯವು ತಂದೆ ಸಮಾನ
ಗಂಗೆ ತುಂಗೆ ಕಾವೇರಿಯು ತಾಯಿ ಸಮಾನ
ಈ ದೇಶದ ಜನರೆಲ್ಲರೂ ಸೋದರ ಸಮಾನ,
ಈ ನಾಡಿನ ಹೃದಯವದು ದೈವ ಸನ್ನಿಧಾನ
ಅಜಂತ ಎಲ್ಲೋರ ಹಳೆಬೀಡು ಬೇಲೂರು
ಶಿಲೆಗಳಿವು ಕಲೆಯ ಆಗರ
ಹಿಂದು, ಬುದ್ಧ, ಜೈನ, ಕ್ರೈಸ್ತ, ಮುಸಲ್ಮಾನ
ಧರ್ಮಗಳ ಮಹಾಸಾಗರ
ನಡೆದು ಹೋದ ಚರಿತೆಯು ನಾಳೆ ಎನುವ ಕವಿತೆಯು
ಈ ನಾಡ ಮಣ್ಣಲಿದೆ ಜೀವನ ಸಾರ/ ಜೀವನ ಸಾರ
ಹ್ಞೂ..ಹ್ಞೂ...ಹ್ಞೂ...ಹ್ಞೂ...
ತಂಗಾಳಿಗೆ ತಲೆದೂಗುವ ಪೈರಿನ ಹಾಡು
ಆ ಹಾಡಿಗೆ ತಾಳ ಕೊಡುವ ಯಂತ್ರದ ಜಾಡು
ವಿಜ್ಞಾನವು ಅಜ್ಞಾನವ ಗೆಲ್ಲುವ ಹಾಡು
ಹೊಸ ಭಾರತ ನಿರ್ಮಾಣವು ಸಾಗಿದೆ ನೋಡು
(* ಸಂಗ್ರಹ: ಡಾ.ಪಂಚಾಕ್ಷರಯ್ಯ, ಹಿರೇಮಠ್, ಸಂಗೀತ ಶಿಕ್ಷಕರು)


Click it and Unblock the Notifications











