ನಿರ್ದೇಶನಕ್ಕೆ ಇಳಿದ 'ಲಂಕೆ' ಸಿನಿಮಾ ನಟಿ.. ಕನ್ನಡ ಕೊಂಕಣಿಯಲ್ಲಿ 'ದಿ ವೆಕೆಂಟ್ ಹೌಸ್' ಸಾಂಗ್ ರಿಲೀಸ್

ಸ್ಯಾಂಡಲ್‌ವುಡ್‌ನಲ್ಲಿ 'ನಾವಿಕ', 'ಅತಿರಥ', 'ನುಗ್ಗೇಕಾಯಿ', 'ಲೋಕಲ್ ಟ್ರೈನ್', 'ಲಂಕೆ' ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ನಟಿ ಎಸ್ತರ್ ನರೋನ್ಹಾ. ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿರುವ ಈಕೆ ಸದ್ಯ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ.

ಗ್ಲಾಮರ್ ಪಾತ್ರಗಳ ಮೂಲಕ ಫೇಮಸ್ ಆಗಿರುವ ಈ ಬ್ಯೂಟಿ ಇದೇ ಮೊದಲ ಬಾರಿಗೆ ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ಅದುವೇ 'ದಿ ವೆಕೆಂಟ್ ಹೌಸ್'. ಈ ಸಿನಿಮಾ ಮೂಲಕ ಡೈರೆಕ್ಟರ್ ಆಗಿ ಕ್ಯಾಪ್ ತೊಟ್ಟಿದ್ದಾರೆ. ಇಷ್ಟೇ ಅಲ್ಲ ನಿರ್ದೇಶನದ ಜೊತೆ ಜೊತೆಗೆ ನಿರ್ಮಾಣ, ಸಂಗೀತ ನಿರ್ದೇಶನ, ನಟನೆ ಜವಾಬ್ದಾರಿಯನ್ನು ಕೂಡ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ.

ester-noronha-the-vacant-house

ಈಗಾಗಲೇ 'ದಿ ವೆಕೆಂಟ್ ಹೌಸ್' ಸಿನಿಮಾದ ಫಸ್ಟ್ ಲುಕ್ ಭಾರಿ ಸದ್ದು ಮಾಡುತ್ತಿದ್ದು, ಕನ್ನಡ ಹಾಗೂ ಕೊಂಕಣಿ ಭಾಷೆಯಲ್ಲಿ ಬಿಡುಗಡೆಯಾಗಿದೆ. ಈ ಸಿನಿಮಾದ ಮೊದಲ ಹಾಡು ಈಗಾಗಲೇ ಕೇಳುಗರನ್ನು ಮೋಡಿ ಮಾಡುತ್ತಿದೆ. ಎಸ್ತರ್ ನರೋನ್ಹಾ ತಮ್ಮ ನಿರ್ದೇಶನದ ಚೊಚ್ಚಲ ಸಿನಿಮಾ 'ದಿ ವೇಕೆಂಟ್ ಹೌಸ್' ಸಿನಿಮಾ ಹಾಡನ್ನು ರಿಲೀಸ್ ಮಾಡಿದ್ದಲ್ಲದೆ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

'ದಿ ವೇಕೆಂಟ್ ಹೌಸ್' ಸಿನಿಮಾ ಲಾಕ್‌ಡೌನ್ ಸಮಯದಲ್ಲಿ ಶುರುವಾಗಿದ್ದು ಎಂದು ನಟಿ ಮಾಹಿತಿ ಹಂಚಿಕೊಂಡಿದ್ದಾರೆ. "ಈ ಸಿನಿಮಾದಲ್ಲಿ ಕಾಣಿಸುವುದು ನಮ್ಮ ತೋಟದ ಮನೆ. ಲಾಕ್‌ಡೌನ್ ಸಮಯದಲ್ಲಿ ನಾವು ಅಲ್ಲಿಗೆ ಶಿಫ್ಟ್ ಆಗಿದ್ದೆವು. ಆ ಸಮಯದನಲ್ಲಿ ಒನ್ ಲೈನ್ ಸ್ಟೋರಿ ಹೊಳೆಯಿತು. ಅದನ್ನು ನಮ್ಮ ತಾಯಿ ಬಳಿ ಚರ್ಚೆ ಮಾಡಿ ಕಥೆ ಬರೆಯಲು ಶುರು ಮಾಡಿದೆ. ಕಥೆ ರೆಡಿಯಾಯ್ತು. ನಾನೇ ಸಿನಿಮಾ ಡೈರೆಕ್ಟರ್ ಮಾಡ್ತೀನಿ ಅಂದುಕೊಂಡಿರಲಿಲ್ಲ.

ester-noronha-the-vacant-house

ಕಥೆ ಬರೆದ ಮೇಲೆ ಬೇರೆಯವರ ಹತ್ತಿರ ರಿಕ್ವೆಸ್ಟ್ ಮಾಡುವುದು ಹೇಗೆ? ಲಾಕ್‌ಡೌನ್ ಇರೋದ್ರಿಂದ ಅವರು ಬರುವುದು ಹೇಗೆ ಎಲ್ಲಾ ಸಮಸ್ಯೆ. ಹೀಗಾಗಿ ನಾನೇ ನಿರ್ದೇಶಿಸಿದೆ. ಇದೊಂದು ಫ್ಯಾಮಿಲಿ ವೆಂಚರ್ಸ್ ಸಿನಿಮಾ. ಕೊಂಕಣಿ ಹಾಗೂ ಕನ್ನಡ ಎರಡೂ ಭಾಷೆಯಲ್ಲಿ ಸಿನಿಮಾ ಮಾಡಿದ್ದೇವೆ. ಒಂದೊಳ್ಳೆ ಟೈಮ್ ನೋಡಿ ಸಿನಿಮಾ ರಿಲೀಸ್ ಮಾಡುತ್ತೇವೆ" ಎಂದು ಎಸ್ತರ್ ನರೋನ್ಹಾ ಹೇಳಿದ್ದಾರೆ.

ಅಂದ್ಹಾಗೆ ಎಸ್ತರ್‌ ನರೋನ್ಹಾ ಮಂಗಳೂರಿನವರಾದರು. ಆದರೆ ಬೆಳೆದಿದ್ದೆಲ್ಲ ಮುಂಬೈನಲ್ಲಿ. ಕನ್ನಡ ಸಿನಿಮಾ 'ಉಸಿರಿಗಿಂತ ನೀನೇ ಹತ್ತಿರ' ಎಂಬ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದಾರೆ. ಬಾಲಿವುಡ್‌ನ ಖ್ಯಾತ ನಟ ಅನುಪಮ್ ಖೇರ್ ನಟನಾ ಶಾಲೆಯಲ್ಲಿ ತರಬೇತಿ ಪಡೆದು ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಎಸ್ತರ್ ಬಳಿಕ ತೆಲುಗು, ತುಳು ಸಿನಿಮಾಗಳಲ್ಲೂ ನಟಿಸಿದ್ದಾರೆ.

'ದಿ ವೆಕೆಂಟ್ ಹೌಸ್' ಸಿನಿಮಾವನ್ನು ಬಹುತೇಕ ಮಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ನರೇಂದ್ರ ಗೌಡ ಛಾಯಾಗ್ರಹಣವಿದ್ದರೆ, ವಿಜಯ್ ರಾಜ್ ಸಂಕಲನವಿದೆ. ಫಸ್ಟ್ ಲುಕ್ ಹಾಗೂ ಹಾಡಿನ 'ದಿ ವೆಕೆಂಟ್ ಹೌಸ್' ಸಿನಿಮಾ ಗಮನ ಸೆಳೆಯುತ್ತಿದೆ.

More from Filmibeat

English summary
Actress Ester Noronha directed debut movie The Vacant House song is out now
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X