ಅರ್ಜುನ್ ಯೋಗಿ- ಸಾರಿಕಾ ರಾವ್ ನಟನೆಯ ರೀ ದೇವರೇ ಹಾಡು 'ಅನಾವರಣ'!
ಹಲವು ಧಾರಾವಾಹಿಗಳಲ್ಲಿ ನಟಿಸಿ ಜನರ ಮನಸೆಳೆದಿರುವ ನಟ ಅರ್ಜುನ್ ಯೋಗಿ ಕನ್ನಡದ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. ಈಗ ಅವರ ಮತ್ತೊಂದು ಸಿನಿಮಾದ ಹಾಡುಗ ಬಿಡುಗಡೆಯಾಗಿದೆ. ಅವರ ಹೊಸ ಸಿನಿಮಾ 'ಅನಾವರಣ' ಈಗ ಸ್ಯಾಂಡಲ್‌ವುಡ್‌ನಲ್ಲಿ ಜಾಗ ಪಡೆಯುತ್ತಿದ್ದು, ಅರ್ಜುನ್ ಯೋಗಿಗೆ ನಾಯಕಿಯಾಗಿ ಸಾರಿಕಾ ರಾವ್ ಕಾಣಿಸಿಕೊಂಡಿದ್ದಾರೆ.
ಸಿನಿಮಾದ ಮೊದಲ ಹಾಡು 'ಏನಾಗಿದೆ...' ಎಂಬ ಪ್ರೇಮಗೀತೆಗೆ ಉತ್ತಮ ಸ್ಪಂದನೆ ಸಿಕ್ಕಿತ್ತು. ಈಗ ಇದೇ ಸಿನಿಮಾದ 'ರೀ ದೇವರೇ....' ಎಂಬ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಗಂಡ ಹೆಂಡತಿ ನಡುವಿನ ಮೆಲೋಡಿ ಹಾಡಿಗೆ ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು, ಹರೀಶ್ ಕುಮಾರ್ ಬಿ.ಕೆ ಹಾಗೂ ಮೇಘನಾ ಕುಲಕರ್ಣಿ ಜೋಶಿ ಕಂಠ ನೀಡಿದ್ದಾರೆ.

'ರೀ ದೇವರೇ....' ಹಾಡಿನಲ್ಲಿ ಅರ್ಜುನ್ ಯೋಗಿ ಹಾಗೂ ಸಾರಿಕಾ ರಾವ್ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ರಾಜಾ ರಾಣಿ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಸಿನಿಮಾ ವೀಕ್ಷಕರನ್ನು ಸೆಳೆಯುತ್ತಿದೆ. ಇನ್ನು, 'ಅನಾವರಣ' ಚಿತ್ರಕ್ಕೆ ನಮ್ಮ ಸಿನಿಮಾ ಬ್ಯಾನರ್ ನಡಿ ಅದ್ವೈತ್ ಪ್ರಭಾಕರ್, ಆರ್.ರಾಮಚಂದ್ರ, ಸತ್ಯ ರಾಣಿ ಜಿ ಮತ್ತು ರಚನಾ ಬಿ. ಹೆಚ್ ಹಣ ಹೂಡಿದ್ದಾರೆ.
'ಅನಾವರಣ' ಚಿತ್ರದಲ್ಲಿ ಅರ್ಜುನ್ ಯೋಗಿ, ಸಾರಿಕಾ ರಾವ್ ನಾಯಕ ಹಾಗೂ ನಾಯಕಿಯಾಗಿ ನಟಿಸಿದ್ದು, ಗೌರೀಶ್ ಅಕ್ಕಿ, ನಂದ ಗೋಪಾಲ್, ಹೊನ್ನವಳ್ಳಿ ಕೃಷ್ಣ, ರಥಸಪ್ತಮಿ ಅರವಿಂದ್, ಕಾಮಿಡಿ ಕಿಲಾಡಿ ಸೂರಜ್, ಸೂರ್ಯ, ಸಂತು, ವಾಣಿ, ರಾಜೇಶ್ವರಿ, ಕಮಲಾ, ಯುಕ್ತಾ, ಧರಣಿ ಕುಮಾರ್, ಸಿದ್ದೀ ವಿನಾಯಕ, ಗಿರೀಶ್ ಯು.ಬಿ, ಶಿವರಾಜ್, ರಂಗೋಲಿ ವಿಜಿ.. ಬೇಬಿ ದೃತಿ ಶುತ್ವ ಮತ್ತು ಅಭಿ ಸೇರಿ ದೊಡ್ಡ ತಾರಾಬಳಗವಿದೆ.

ಈಗಾಗಲೇ 40ಕ್ಕೂ ಹೆಚ್ಚು ಕಿರು ಚಿತ್ರಗಳನ್ನು ಮಾಡಿರುವ ಅನುಭವ ಇರುವ ರಂಗ ಕಲಾವಿದರು, ನಿರ್ದೇಶಕರು ಆಗಿರುವ ಹರೀಶ್ ಕುಮಾರ್ ಹಾಗೂ ಮಂಜುನಾಥ್ ಪಿಳ್ಳಪ್ಪ ಇಬ್ಬರು ಅನಾವರಣ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಡಾ.ವಿ.ನಾಗೇಂದ್ರ ಪ್ರಸಾದ್ ಮತ್ತು ಶಶಿಕುಮಾರ್ ಬೆಳಕವಾಡಿ ಸಾಹಿತ್ಯ ಬರೆದಿದ್ದಾರೆ.
ಸಿನಿಮಾಗೆ ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಮಾಡಿದ್ದಾರೆ. ಹಿನ್ನಲೆ ಸಂಗೀತ ಬಿ.ಆರ್.ಹೇಮಂತ್ ಕುಮಾರ್ ನೀಡಿದ್ದು, ಮದನ್ ಹರಿಣಿ ಮತ್ತು ರಾಮ್ಜ್ ನೃತ್ಯ ಸಂಯೋಜನೆ ಸಿನಿಮಾಕ್ಕಿದೆ. ಫ್ಯಾಮಿಲಿ ಡ್ರಾಮಾ ಜೊತೆಗೆ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಅನಾವರಣ ಸಿನಿಮಾ ಡಿಸೆಂಬರ್ 1ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗಲಿದೆ. ವಿಜಯ್ ಸಿನಿಮಾಸ್ ಬಿಡುಗಡೆ ಮಾಡಲಿದ್ದಾರೆ.
ನಟ ಅರ್ಜುನ್ ಯೋಗಿ
ನಟ ಅರ್ಜುನ್ ಯೋಗಿ ಕಿರುತೆರೆಯಲ್ಲಿ ಬಹಳಷ್ಟು ಹೆಸರು ಮಾಡಿದ ಕಲಾವಿದ. ವರ್ಷಗಳ ಕಾಲ ಕಿರುತೆರೆಯಲ್ಲಿ ತಮ್ಮ ಛಾಪು ಮೂಡಿಸಿದ್ದ ಅವರು, ಬೆಳ್ಳಿತೆರೆಯಲ್ಲೂ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಅರ್ಜುನ್ ಯೋಗಿ, ನನ್ನ ಪ್ರಕಾರ, ಚೇಸ್ ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. ಇದರ ಜೊತೆಗೆ ಕೆಲವು ರಿಯಾಲಿಟಿ ಶೋಗಳಲ್ಲಿಯೂ ಭಾಗಿಯಾಗಿದ್ದಾರೆ.


Click it and Unblock the Notifications











