Just In
Don't Miss!
- News
‘ನಕಲಿ ವ್ಯಾಕ್ಸಿನೇಷನ್’ ವಿಡಿಯೋ ವೈರಲ್: ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ಸುಧಾಕರ್
- Education
Karnataka SSLC Exam 2021: ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾತಿ ಕಡ್ಡಾಯ ಇಲ್ಲ
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Sports
ಭಾರತ vs ಆಸೀಸ್: ಕಾಕತಾಳೀಯ, ಕುತೂಹಲಕಾರಿ ಅಂಕಿ-ಅಂಶಗಳು!
- Automobiles
ಕೋವಿಡ್ ವ್ಯಾಕ್ಸಿನ್ ಸಾಗಾಣಿಕೆಗಾಗಿ ಹೊಸ ಮಾದರಿಯ ಟ್ರಕ್ ಸಿದ್ದಪಡಿಸಿದ ಭಾರತ್ ಬೆಂಝ್
- Lifestyle
ಶೇವಿಂಗ್ ಟಿಪ್ಸ್: ಹೀಗೆ ಮಾಡಿದರೆ ತ್ವಚೆ ಮೃದುವಾಗಿರುತ್ತೆ, ತುರಿಕೆ ಇರಲ್ಲ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
100 ಮಿಲಿಯನ್ ಕಂಡ ಬೆಳಗೆದ್ದು ಹಾಡು: ರಶ್ಮಿಕಾ ಮಂದಣ್ಣ ಟ್ವೀಟ್
ರಶ್ಮಿಕಾ ಮಂದಣ್ಣ ನಟಿಸಿದ್ದ ಚೊಚ್ಚಲ ಸಿನಿಮಾ 'ಕಿರಿಕ್ ಪಾರ್ಟಿ' ತೆರೆಕಂಡು 4 ವರ್ಷ ಕಳೆದಿದೆ. ರಕ್ಷಿತ್ ಶೆಟ್ಟಿ ನಾಯಕರಾಗಿದ್ದ ಈ ಚಿತ್ರವನ್ನು ರಿಷಬ್ ಶೆಟ್ಟಿ ನಿರ್ದೇಶಿಸಿದ್ದರು.
ಇಂದು ಸೌತ್ ಇಂಡಿಯಾದಲ್ಲಿ ಸ್ಟಾರ್ ನಟಿಯಾಗಿ ಮಿಂಚುತ್ತಿರುವ ರಶ್ಮಿಕಾಗೆ ಲೈಫ್ ಕೊಟ್ಟಿದ್ದು ಇದೇ ಚಿತ್ರ. ಈ ಸಿನಿಮಾ 'ಬೆಳಗೆದ್ದು ಯಾರ ಮುಖವಾ ನಾನು ನೋಡಲಿ......' ಎಂಬ ಹಾಡು ಯ್ಯೂಟ್ಯೂಬ್‌ನಲ್ಲಿ 100 ಮಿಲಿಯನ್ ವೀಕ್ಷಣೆ ಕಂಡಿದೆ.
100 ಮಿಲಿಯನ್ ವೀಕ್ಷಣೆ ಕಂಡ ಕಿರಿಕ್ ಪಾರ್ಟಿಯ 'ಬೆಳಗೆದ್ದು..' ಹಾಡು: ಧನ್ಯವಾದ ತಿಳಿಸಿದ ರಕ್ಷಿತ್ ಶೆಟ್ಟಿ
ಈ ಕುರಿತು ರಶ್ಮಿಕಾ ಮಂದಣ್ಣ ಟ್ವಿಟ್ಟರ್ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. ''ಬೆಳಗೆದ್ದು...ನನ್ನ ಮೊದಲ ಹಾಡು. ನೂರು ಮಿಲಿಯನ್ ದಾಟಿದೆ. ಈ ಹಾಡು ನನಗಾಗಿ ಮೇಕಿಂಗ್ ಮಾಡಿದ್ದು ನೆನಪಾಗುತ್ತಿದೆ. ಆ ದೃಶ್ಯಗಳು ಕಣ್ಣ ಮುಂದಿದೆ. ನನ್ನಲ್ಲಿ ನಾನು ಸಾನ್ವಿಯನ್ನು ಕಂಡೆ. ಅಹಾ ಎಂತಹ ಜರ್ನಿ'' ಎಂದು ಟ್ವೀಟ್ ಮಾಡಿದ್ದಾರೆ.
ಈ ಟ್ವೀಟ್‌ನಲ್ಲಿ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಸಂಯುಕ್ತಾ ಹೆಗಡೆ, ಅಜನೀಶ್ ಲೋಕನಾಥ್, ಪರಂವಾ ಸ್ಟುಡಿಯೋಸ್ ಟ್ವಿಟ್ಟರ್ ಹ್ಯಾಂಡಲ್‌ಗಳಿಗೆ ಪೋಸ್ಟ್ ಮಾಡಿದ್ದಾರೆ.
ರಶ್ಮಿಕಾ ಮತ್ತು ರಕ್ಷಿತ್ ಶೆಟ್ಟಿ ಕಾಣಿಸಿಕೊಂಡಿರುವ ಈ ಹಾಡಿಗೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಜಯ್ ಪ್ರಕಾಶ್ ಧ್ವನಿ ನೀಡಿದ್ದಾರೆ. ಧನಂಜಯ್ ರಂಜನ್ ಸಾಹಿತ್ಯ ರಚಿಸಿದ್ದಾರೆ.
ಇನ್ನೂ ಕನ್ನಡದಲ್ಲಿ 100 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದ ಹಾಡಿದ ಸಾಲಿನಲ್ಲಿ ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾದ 'ಖರಾಬು..' ಸಾಂಗ್ ಮೊದಲ ಸ್ಥಾನದಲ್ಲಿದೆ. 180 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ಶರಣ್ ಮತ್ತು ಆಶಿಕಾ ರಂಗನಾಥ್ ನಟನೆಯ 'ಚುಟು ಚುಟು..' ಸಾಂಗ್ ಎರಡನೇ ಸ್ಥಾನದಲ್ಲಿದೆ.