'ವಾಮನ'ನ ಬೆಂಬಲಕ್ಕೆ ಬಂದ ಯಂಗ್ ರೆಬಲ್ ಸ್ಟಾರ್ : ಮುದ್ದು ರಾಕ್ಷಸಿ ಹಾಡು ರಿಲೀಸ್

By ಫಿಲ್ಮಿಬೀಟ್ ಡೆಸ್ಕ್

ಸ್ಯಾಂಡಲ್‌ವುಡ್‌ನ 'ಶೋಕ್ದಾರ್' ಧನ್ವೀರ್ ಗೌಡ ನಟನೆಯ ಹೊಸ ಸಿನಿಮಾ 'ವಾಮನ'. ಈ ಸಿನಿಮಾ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ. ಇತ್ತೀಚೆಗೆಷ್ಟೇ ವಾಮನ ಸಿನಿಮಾದ ಟೈಟಲ್ ಸಾಂಗ್ ರಿಲೀಸ್ ಆಗಿತ್ತು. ವಾ..ವಾ..ವಾ..ವಾಮನ ಮಾಸ್ ಕೇಳಿ ಸಿನಿಪ್ರಿಯರು ಥ್ರಿಲ್ ಆಗಿದ್ದರು.

ಈಗ 'ವಾಮನ' ಸಿನಿಮಾದಿಂದ "ಮುದ್ದು ರಾಕ್ಷಸಿ.." ಎಂಬ ರೋಮ್ಯಾಂಟಿಕ್ ಸಾಂಗ್ ಬಿಡುಗಡೆಯಾಗಿದೆ. ಈ ಹಾಡಿಗೆ ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ. 'ಕಾಂತಾರ' ಖ್ಯಾತಿಯ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಈ ಸಿನಿಮಾಗೆ ಟ್ಯೂನ್ ಹಾಕಿದ್ದು, ವಿಜಯ್ ಪ್ರಕಾಶ್ ಹಾಗೂ ಹರ್ಷಿಕಾ ದೇವನಾಥ್ ಹಾಡಿದ್ದಾರೆ. "ಮುದ್ದು ರಾಕ್ಷಸಿ..." ಹಾಡಿಗೆ ಧನ್ವೀರ್ ಹಾಗೂ ರೀಷ್ಮಾ ನಾಣಯ್ಯ ಸ್ಟೆಪ್ ಹಾಕಿದ್ದು, ಸಂಗೀತ ಪ್ರಿಯರಿಗೆ ಕಿಕ್ ಕೊಡುತ್ತಿದೆ.

Dhanveer Reeshma Nanaiah Movie Vamana Song Released by Abhishek Ambareesh

ಶಂಕರ್ ರಾಮನ್ ನಿರ್ದೇಶಿಸುತ್ತಿರುವ ಈ ಸಿನಿಮಾವನ್ನು ಚೇತನ್ ಗೌಡ ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಧನ್ವೀರ್ ಹಾಗೂ ರೀಷ್ಮಾ ನಾಣಯ್ಯ ಜೋಡಿಯ 'ವಾಮನ' ಸಿನಿಮಾದ ಎರಡನೇ ಹಾಡು "ಮುದ್ದು ರಾಕ್ಷಸಿ.." ಮೆಲೋಡಿ ಹಾಡನ್ನು ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಷ್ ರಿಲೀಸ್ ಮಾಡಿದ್ದಾರೆ.

"ನಾನು ಈಗಷ್ಟೇ ಮುದ್ದು ರಾಕ್ಷಸಿ ಹಾಡು ನೋಡಿದೆ. ಒಂದು ಸಾಂಗ್ ಹಿಟ್ ಆಗಬೇಕು ಅಂದರೆ, ಅದರ ಕ್ರೆಡಿಟ್ ಹೀರೋಗೂ ಅಲ್ಲ ಹೀರೋಯಿನ್‌ಗೂ ಅಲ್ಲ. ಮ್ಯೂಸಿಕ್ ಡೈರೆಕ್ಟರ್, ಸಾಹಿತಿಗೆ ಹೋಗಬೇಕು. ಹಾಡುಗಳನ್ನು ತರುವಲ್ಲಿ ಇವರಿಬ್ಬರ ಎಫರ್ಟ್ ಜಾಸ್ತಿನೇ ಇರುತ್ತದೆ. ನನ್ನ ಗೆಳೆಯ ಧನ್ವೀರ್ ಇಷ್ಟು ಚೆನ್ನಾಗಿ ರೋಮ್ಯಾನ್ಸ್ ಮಾಡ್ತಾನೆ ಗೊತ್ತಿರಲಿಲ್ಲ. ಬೈ ಟು ಲವ್ ಸಿನಿಮಾದಲ್ಲಿ ಸ್ವಲ್ಪ ನೋಡಿದ್ದೆವು. ಈಗ ವಾಮನ ಮುಖಾಂತರ ಕಂಪ್ಲೀಟ್ ಕಮರ್ಷಿಯಲ್ ಪ್ಯಾಕೇಜ್, ಕ್ಯೂಟ್ ಲವರ್ ಬಾಯ್ ರೀತಿ ಕಾಣಿಸುತ್ತಿದ್ದಾನೆ" ಎಂದಿದ್ದಾರೆ ಅಭಿಷೇಕ್ ಅಂಬರೀಶ್.

ಇತ್ತ ಧ್ವನೀರ್ "ಒಂದೇ ಒಂದು ಫೋನ್ ಕಾಲ್‌ಗೆ ಬಂದು ಮುದ್ದು ರಾಕ್ಷಸಿ ಹಾಡನ್ನು ಅಭಿಷೇಕ್ ಅಂಬರೀಶ್ ಬಿಡುಗಡೆ ಮಾಡಿಕೊಟ್ಟಿದ್ದಾರೆ. ಭೂಷಣ್ ಮಾಸ್ಟರ್ ಕೊರಿಯೋಗ್ರಫಿಗೆ ನಾನು ಹೆಜ್ಜೆ ಹಾಕಿದ್ದೇನೆ" ಎಂದು ಹಾಡಿನ ಬಗ್ಗೆ ಹೇಳಿದ್ದಾರೆ.

Dhanveer Reeshma Nanaiah Movie Vamana Song Released by Abhishek Ambareesh

'ವಾಮನ' ಸಿನಿಮಾದಲ್ಲಿ ಧನ್ವೀರ್‌ಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಾಯಕಿ. ಇವರೊಂದಿಗೆ ತಾರಾ, ಸಂಪತ್‌, ಆದಿತ್ಯ ಮೆನನ್‌, ಶಿವರಾಜ್ ಕೆಆರ್ ಪೇಟೆ, ಅವಿನಾಶ್‌, ಅಚ್ಯುತ್‌ ಕುಮಾರ್‌, ಕಾಕ್ರೋಚ್‌ ಸುಧಿ, ಭೂಷಣ್‌ ಮುಂತಾದವು ನಟಿಸಿದ್ದಾರೆ. ಮಹೇಂದ್ರ ಸಿಂಹ ಕ್ಯಾಮರಾ ವರ್ಕ್ ಇದ್ದು, ಸುರೇಶ್ ಆರ್ಮುಗಂ ಸಂಕಲನವಿದೆ.

More from Filmibeat

English summary
Dhanveer Reeshma Nanaiah Movie Vamana Song Released by Abhishek Ambareesh
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X