"ಬೇಕಿತ್ತಾ ಬೇಕಿತ್ತಾ.. ಈ ಲವು ಬೇಕಿತ್ತಾ" ಅಂತ ಬಾಂಡ್ ಅವತಾರವೆತ್ತಿ ಬಂದ ರಾಜು

By ಫಿಲ್ಮಿಬೀಟ್ ಡೆಸ್ಕ್

'ಫಸ್ಟ್ rank ರಾಜು' ಸಿನಿಮಾ ಕನ್ನಡಕ್ಕೆ ಹೊಸ ಅಭಿರುಚಿಯನ್ನು ಕೊಟ್ಟ ಸಿನಿಮಾ. ಈ ಸಿನಿಮಾ ಮೂಲಕ ಗುರುನಂದನ್ ಕನ್ನಡಿಗರಿಗೆ ಮತ್ತಷ್ಟು ಹತ್ತಿರವಾಗಿದ್ದರು. ಈಗ ಮತ್ತೊಂದು ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸುವುದಕ್ಕೆ ಬರುತ್ತಿದ್ದಾರೆ.

ಗುರುನಂದನ್ ನಾಯಕರಾಗಿ ನಟಿಸಿರುವ 'ರಾಜು ಜೇಮ್ಸ್ ಬಾಂಡ್' ಸಿನಿಮಾ ಬಿಡುಗಡೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈಗಾಗಲೇ ಪ್ರಚಾರ ಆರಂಭಿಸಿರೋ ಚಿತ್ರತಂಡ ಮಸ್ತ್ ಆಗಿರೋ ಹಾಡೊಂದನ್ನು ರಿಲೀಸ್ ಮಾಡಿದೆ.

ದೀಪಕ್ ಮಧುವನಹಳ್ಳಿ ಬರೆದಿರುವ "ಬೇಕಿತ್ತಾ ಬೇಕಿತ್ತಾ.. ಈ ಲವು ಬೇಕಿತ್ತಾ" ಅನ್ನೋ ಲಿರಿಕಲ್ ಸಾಂಗ್ ರಿಲೀಸ್ ಆಗಿದೆ. ತಮಿಳು ಗಾಯಕ ಅಂಥೋನಿ ದಾಸ್ ಈ ಹಾಡಿಗೆ ಧ್ವನಿ ನೀಡಿದ್ದಾರೆ. ಅನೂಪ್ ಸೀಳಿನ್ ಈ ಹಾಡಿಗೆ ಟ್ಯೂನ್ ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ಅಧಿಕಾರಿ ವೆಂಕಟೇಶ್ ಹಾಡನ್ನು ರಿಲೀಸ್ ಮಾಡಿದ್ದಾರೆ.

First Rank Raju Gurunandan starrer Raju James Bond Movie song released

ಅಂದ್ಹಾಗೆ 'ರಾಜು ಜೇಮ್ಸ್ ಬಾಂಡ್' ಸಿನಿಮಾವನ್ನು ದೀಪಕ್ ಮಧುವನಹಳ್ಳಿ ನಿರ್ದೇಶನ ಮಾಡಿದ್ದಾರೆ. "ರಾಜು ಜೇಮ್ಸ್ ಬಾಂಡ್ ನಾನು ನಿರ್ದೇಶಿಸುತ್ತಿರುವ ಮೂರನೇ ಚಿತ್ರ. ಈ ಚಿತ್ರ ವಿಭಿನ್ನ ಕಥಾಹಂದರ ಹೊಂದಿದೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದೆ. ಆಗಸ್ಟ್‌ನಲ್ಲಿ ಸಿನಿಮಾ ತೆರೆಗೆ ತರುವ ಪ್ರಯತ್ನ ಮಾಡುತ್ತಿದ್ದೇವೆ‌. ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಬರ್ತೂರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಲಂಡನ್ ನಲ್ಲಿ 21 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ" ಎಂದು ನಿರ್ದೇಶಕ ದೀಪಕ್ ಮಧುವನಹಳ್ಳಿ ಹೇಳಿದ್ದಾರೆ.

"ದೀಪಕ್ ಮಧುವನಹಳ್ಳಿ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಮಂಜು ವಿಶ್ವಕರ್ಮ ಹಾಗೂ ಕಿರಣ್ ಬರ್ತೂರ್ ಯಾವುದೇ ಕೊರತೆ ಬಾರದಂತೆ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದಲ್ಲಿ ನನ್ನ ಪಾತ್ರ ನನ್ನ ಹಿಂದಿನ ಚಿತ್ರಗಳಿಗಿಂತ ವಿಭಿನ್ನವಾಗಿರುತ್ತದೆ. ಅನೂಪ್ ಸೀಳಿನ್ ಸಂಗೀತದಲ್ಲಿ ಮೂಡಿಬಂದಿರುವ ಎಲ್ಲಾ ಹಾಡುಗಳು ಚೆನ್ನಾಗಿದೆ." ಎನ್ನುತ್ತಾರೆ ನಾಯಕ ಗುರುನಂದನ್.

First Rank Raju Gurunandan starrer Raju James Bond Movie song released

'ರಾಜು ಜೇಮ್ಸ್ ಬಾಂಡ್' ಸಿನಿಮಾದಲ್ಲಿ ಒಟ್ಟು ನಾಲ್ಕು ಹಾಡುಗಳಿವೆ‌. ಎಲ್ಲಾ ಹಾಡುಗಳೂ ಒಂದಕ್ಕಿಂತ ಒಂದು ವಿಭಿನ್ನವಾಗಿವೆ. ಸದ್ಯ ಮೊದಲ ಹಾಡು ರಿಲೀಸ್ ಆಗಿದೆ. ಇನ್ನು ಗುರುನಂದನ್‌ಗೆ ನಾಯಕಿಯಾಗಿ ಮೃದಲಾ ನಟಿಸಿದ್ದಾರೆ. ರವಿಶಂಕರ್, ಸಾಧುಕೋಕಿಲ, ಅಚ್ಯುತ ಕುಮಾರ್, ಚಿಕ್ಕಣ್ಣ, ಜೈ ಜಗದೀಶ್, ತಬಲ ನಾಣಿ, ಮಂಜುನಾಥ್ ಹೆಗಡೆ, ವಿಜಯ್ ಚೆಂಡೂರ್ ಈ ಸಿನಿಮಾದಲ್ಲಿ ನಟಿಸಿದ್ದಾರೆ.

More from Filmibeat

English summary
First Rank Raju fame Gurunandan starrer Raju James Bond Movie song released, know more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X