twitter
    For Quick Alerts
    ALLOW NOTIFICATIONS  
    For Daily Alerts

    ''ಗಾಳಿಪಟ ‍2" ಚಿತ್ರದ "ದೇವ್ಲೆ ದೇವ್ಲೆ" ಹಾಡು 'ಲಿಲೀಜ್'

    |

    'ಗಾಳಿಪಟ 2' ಚಿತ್ರತಂಡವು ನಿಧಾನಕ್ಕೆ ಪ್ರಚಾರ ಪ್ರಾರಂಭಿಸಿದೆ. ಒಂದೊಂದಾಗಿ ಸಿನಿಮಾದ ಹಾಡುಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಮೊದಲಿಗೆ ಎಕ್ಸಾಂ ಹಾಡು, ಬಳಿಕ ಪ್ರೇಮಗೀತೆ ಬಿಡುಗಡೆ ಮಾಡಿದ್ದ ಚಿತ್ರತಂಡ ಇದೀಗ ಎಣ್ಣೆ ಹಾಡೊಂದನ್ನು ಬಿಡುಗಡೆ ಮಾಡಿದೆ.

    'ದೇವ್ಲೆ-ದೇವ್ಲೆ' ಎಂಬ ಹೊಸ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದ್ದು, ಯೋಗರಾಜ್ ಭಟ್ ಬರೆದಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಹಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಈಗಾಗಲೇ ಹಲವು ಸೂಪರ್ ಹಿಟ್ ಎಣ್ಣೆ ಹಾಡುಗಳನ್ನು ಭಟ್ಟರು ಬರೆದಿದ್ದಾರೆ. ಅದಾಗ್ಯೂ ಸಹ ಈ ಹಾಡು ಗಮನ ಸೆಳೆಯುತ್ತಿದೆ. ಇತರೆ ಹಾಡುಗಳಿಗಿಂತ ಭಿನ್ನವಾಗಿಯೂ ಇದೆ.

    ಈ ಹಾಡಿನಲ್ಲಿ 'ರ' ಕಾರ ಬರುವ ಕಡೆಯೆಲ್ಲ 'ಲ' ಕಾರ ಬಳಸಿರುವುದು ವಿಶೇಷವಾಗಿದೆ. ಹಾಡಿಗೆ ಒಂದು ರೀತಿಯ ಪೆದ್ದುತನವನ್ನು, ಕುಡುಕನ ಅಮಲುತನವನ್ನೂ ನೀಡುತ್ತಿದೆ.

    ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ಯೋಗರಾಜ್ ಭಟ್ಟರು, 'ಈ ಹಾಡನ್ನು ಬರೆದು ಅರ್ಜುನ್ ಜನ್ಯ ಅವರಿಗೆ ಕಳುಹಿಸಿದೆ. ಮೊದಲು ಈ ಹಾಡನ್ನು "ದೇವ್ರೆ ದೇವ್ರೆ" ಎಂದು ಬರೆದಿದ್ದು. ಆನಂತರ ಇದು ಮಾಮೂಲಿ ತರಹ ಇದೆ. ಸ್ವಲ್ಪ ಏನಾದರೂ ಬದಲಾವಣೆ ಮಾಡಿ ಎಂದರು ಅರ್ಜುನ್ ಜನ್ಯ. ಆಗ ರ ಕಾರ ತೆಗೆದು ಲ‌ ಕಾರ ಹಾಕಿ ಅಂದೆ. ಆಗ ಎಲ್ಲರಿಗೂ ಹಿಡಿಸಿತು. ವಿಜಯ್ ಪ್ರಕಾಶ್ ಸುಶ್ರಾವ್ಯವಾಗಿ ಹಾಡಿದ್ದಾರೆ. ನನ್ನ , ವಿಜಯ್ ಪ್ರಕಾಶ್ ಹಾಗೂ ಅರ್ಜುನ್ ಜನ್ಯರ ಕಾಂಬಿನೇಶನ್ ನಲ್ಲಿ ಸಾಕಷ್ಟು ಎಣ್ಣೆ ಹಾಡುಗಳು ಗೆದ್ದಿವೆ. ಇದು ಕೂಡ ಗೆಲುತ್ತದೆ ಎಂಬ ಭರವಸೆಯಿದೆ'' ಎಂದರು.

    ವಿಪರೀತ ಚಳಿಯಲ್ಲಿ ಚಿತ್ರೀಕರಣ

    ವಿಪರೀತ ಚಳಿಯಲ್ಲಿ ಚಿತ್ರೀಕರಣ

    ''ಕೊರೋನ ತನ್ನ ಅಟ್ಟಹಾಸ ಮೆರೆಯುತ್ತಿದ್ದ ಸಮಯದಲ್ಲಿ ಚಿತ್ರೀಕರಣವಾದ ಹಾಡು ಇದು. ಎಲ್ಲಾ ಕಡೆ ಲಾಕ್ ಡೌನ್. ಅಂತಹ ಸಮಯದಲ್ಲಿ ದೂರದ ಕಜಾಕಿಸ್ತಾನದಲ್ಲಿ ಚಿತ್ರೀಕರಣ ಮಾಡುವುದು ಅಂದರೆ ಕಷ್ಟ ಸಾಧ್ಯ. ಆದರೆ ಅದನ್ನು ಸಾಧ್ಯ ಮಾಡಿದವರು ನಮ್ಮ ನಿರ್ಮಾಪಕ ರಮೇಶ್ ರೆಡ್ಡಿ. ಈ ಹಾಡಿಗೆ ಸ್ನೋ ಬೇಕಾಗಿದ್ದರಿಂದ ಅಲ್ಲಿಗೆ ಹೋದೆವು. ಆದರೆ ಕೊನೆಗೆ ಯಾಕಾದರೂ ಬಂದೆವೊ? ಅನಿಸುವಷ್ಟು ಚಳಿ ಅಲ್ಲಿ. ಇಷ್ಟೆಲ್ಲಾ ಕಷ್ಟಗಳ ನಡುವೆ ಎಲ್ಲರಿಗೂ ಇಷ್ಟವಾಗುವ ಹಾಡನ್ನು ಚಿತ್ರಿಸಿಕೊಂಡು ಬಂದಿದ್ದೀವಿ. ಸಹಕಾರ ನೀಡಿದ್ದ ಇಡೀ ತಂಡಕ್ಕೆ ವಂದನೆಗಳು'' ಎಂದರು.

    ಗೊಂದಲ ಇತ್ತಂತೆ ಗಣೇಶ್‌ಗೆ

    ಗೊಂದಲ ಇತ್ತಂತೆ ಗಣೇಶ್‌ಗೆ

    ''ಕೋವಿಡ್ ಸಮಯದಲ್ಲಿ ಯಾರಿಗೂ ಏನೂ ಆಗದ ಹಾಗೆ ಕಜಾಕಿಸ್ತಾನಕ್ಕೆ ಹುಷಾರಾಗಿ ಕರೆದು ಕೊಂಡು ಹೋಗಿ ಬಂದ ನಿರ್ಮಾಪಕರಿಗೆ ಧನ್ಯವಾದ. ಇನ್ನು ಈ ಹಾಡಿನ ಬಗ್ಗೆ ಹೇಳಬೇಕೆಂದರೆ ಯೋಗರಾಜ್ ಸರ್ ಈ ಹಾಡನ್ನು ನನಗೆ ಕಳುಹಿಸಿದಾಗ, ಇದೇನ್ ಸರ್ ಹೀಗಿದೆ? ಈ ಹಾಡು ಕೇಳಿದವರು ನಿಮ್ಮ ಬಗ್ಗೆ ಏನಾದರೂ ಅಂದುಕೊಳ್ಳುತ್ತಾರೆ ಅಂದೆ. ಆನಂತರ ಇಲ್ಲ ಗಣಪ ಇನ್ನೊಂದು ಸಲ ಕೇಳು ಅಂದರು. ಕೇಳುತ್ತಾ, ಕೇಳುತ್ತಾ ನಾನೇ ಸದಾ ಗುನುಗುವಂತಾಯಿತು. ಅಂದು ಇದ್ದ ಆತಂಕ ಈಗ ಇಲ್ಲ. ಜನ "ದೇವ್ಲೆ ದೇವ್ಲೆ" ಹಾಡನ್ನು ಒಪ್ಪಿಕೊಳ್ಳುತ್ತಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ವಿಜಯ್ ಪ್ರಕಾಶ್ ಗಾಯನ, ಪಾತಾಜೆ ಅವರ ಛಾಯಾಗ್ರಹಣ, ಧನು ಮಾಸ್ಟರ್ ನೃತ್ಯ ನಿರ್ದೇಶನ ಹಾಗೂ ಎಲ್ಲರ ಅಭಿನಯ ಈ ಹಾಡನ್ನು ಶ್ರೀಮಂತಗೊಳಿಸಿದೆ ಎಂದರು ನಾಯಕ ಗೋಲ್ಡನ್ ಸ್ಟಾರ್ ಗಣೇಶ್.

    'ಕವಿತೆ ಕವಿತೆ' ಹಾಡು ನೆನಪಿಸಿಕೊಂಡ ವಿಜಯ್ ಪ್ರಕಾಶ್

    'ಕವಿತೆ ಕವಿತೆ' ಹಾಡು ನೆನಪಿಸಿಕೊಂಡ ವಿಜಯ್ ಪ್ರಕಾಶ್

    ಯೋಗರಾಜ್ ಭಟ್ ಹಾಗೂ ಗಣೇಶ್ ಅವರ ಮೂಲಕ ನನ್ನ ಗಾಯನದ ಜರ್ನಿ "ಗಾಳಿಪಟ" ಮೊದಲ ಭಾಗದಲ್ಲಿ ಆರಂಭವಾಯಿತು "ಕವಿತೆ ಕವಿತೆ" ಹಾಡಿನ ಮೂಲಕ. ಈಗ "ಗಾಳಿಪಟ 2" ಚಿತ್ರದಲ್ಲೂ ಹಾಡಿದ್ದೇನೆ. ಲ ಕಾರದಲ್ಲಿ ಈ ಹಾಡನ್ನು ಹಾಡುವುದು ಕಷ್ಟ ಅಂದುಕೊಂಡೆ. ಅಭ್ಯಾಸ ಮಾಡಿದ್ದೆ. ಅರ್ಧ ಗಂಟೆಯಲ್ಲಿ "ದೇವ್ಲೆ ದೇವ್ಲೆ" ಹಾಡು ಹಾಡಿದೆ. ಈ ಹಿಂದೆ ಕೂಡ ನನ್ನ ಹಾಗೂ ಭಟ್ಟರ ಕಾಂಬಿನೇಶನಲ್ಲಿ ಸಾಕಷ್ಟು ಗೀತೆಗಳು ಜನಪ್ರಿಯವಾಗಿದೆ ಎಂದರು ಗಾಯಕ ವಿಜಯ್ ಪ್ರಕಾಶ್.

    ಶೀಘ್ರದಲ್ಲಿಯೇ ತೆರೆಗೆ ಬರಲಿದೆ ಸಿನಿಮಾ

    ಶೀಘ್ರದಲ್ಲಿಯೇ ತೆರೆಗೆ ಬರಲಿದೆ ಸಿನಿಮಾ

    ನಾಯಕರಾದ ದಿಗಂತ್, ಪವನ್ ಕುಮಾರ್, ನಾಯಕಿ ಶರ್ಮಿಳಾ ಮಾಂಡ್ರೆ, ನಟಿ ಸುಧಾ ಬೆಳವಾಡಿ, ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ, ನೃತ್ಯ ನಿರ್ದೇಶಕ ಧನು ಮಾಸ್ಟರ್ ಹಾಗೂ ಆನಂದ್ ಆಡಿಯೋ ಶ್ಯಾಮ್ "ದೇವ್ಲೆ ದೇವ್ಲೆ" ಹಾಡಿನ ಬಗ್ಗೆ ಹಾಗೂ ಚಿತ್ರದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು. 'ಗಾಳಿಪಟ 2' ಸಿನಿಮಾ ಶೀಘ್ರದಲ್ಲಿಯೇ ತೆರೆಗೆ ಬರಲಿದೆ.

    English summary
    Galipata 2 Movie new song Devle Devle released. Song written by Yogaraj Bhat, sung by Vijaya Prakash, music composed by Arjun Janya.
    Saturday, July 16, 2022, 10:24
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X