Don't Miss!
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಹಳೆ ಪದ್ಮಾವತಿ'ಯನ್ನ ಹಿಂದಿಕ್ಕಲು ಬಂದ 'ಹೊಸ ಪದ್ಮಾವತಿ'
Recommended Video
ದುನಿಯಾ ವಿಜಯ್ ಮತ್ತು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಜೋಡಿಯಲ್ಲಿ ಮೂಡಿ ಬಂದಿದ್ದ ಸಿನಿಮಾ 'ಜಾನಿ'. ಈ ಚಿತ್ರ ಸೂಪರ್ ಹಿಟ್ ಆಗಿತ್ತು. ಸಿನಿಮಾಗಿಂತ ಹೆಚ್ಚು ಯಶಸ್ಸು ಕಂಡಿದ್ದು 'ಊರಿಗೊಬ್ಳೆ ಪದ್ಮಾವತಿ' ಹಾಡು.
ಇದೀಗ, 'ಜಾನಿ' ಚಿತ್ರದ ಮುಂದುವರೆದ ಭಾಗ 'ಜಾನಿ ಜಾನಿ ಎಸ್ ಪಪ್ಪಾ' ಸಿನಿಮಾ ತಯಾರಾಗುತ್ತಿದೆ. ಈ ಚಿತ್ರದಲ್ಲಿ ದುನಿಯಾ ವಿಜಯ್ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ ಜೋಡಿಯಾಗಿದ್ದು, ಇಲ್ಲಿಯೂ 'ಪದ್ಮಾವತಿ' ಗುಣಗಾನ ಜೋರಾಗಿದೆ.
ಹೌದು, 'ಹೊಸ ಪದ್ಮಾವತಿ' ಬಗ್ಗೆ ಹಾಡೊಂದು ಸಿದ್ದವಾಗಿದ್ದು, ಈಗ ಹಾಡಿನ ಟೀಸರ್ ರಿಲೀಸ್ ಆಗಿದೆ. ಪಕ್ಕಾ ಮಾಡ್ರನ್ ಹುಡುಗಿ ಗೆಟಪ್ ನಲ್ಲಿ ರಚಿತಾ ಮಿಂಚಿದ್ದು, ಸಖತ್ ಕಲರ್ ಫುಲ್ ಆಗಿ ಮೂಡಿ ಬಂದಿದೆ.
'ಜಾನಿ ಜಾನಿ ಎಸ್ ಪಪ್ಪಾ' ಬಗ್ಗೆ ಭವಿಷ್ಯ ನುಡಿದ ಗಡ್ಡಪ್ಪ
ಪ್ರೀತಂ ಗುಬ್ಬಿ ಈ ಚಿತ್ರವನ್ನ ನಿರ್ದೇಶನ ಮಾಡಿದ್ದು, ದುನಿಯಾ ಟಾಕೀಸ್ ನಿರ್ಮಾಣ ಸಂಸ್ಥೆಯಲ್ಲಿ ತಯಾರಾಗಿದೆ. ಸಾಧು ಕೋಕಿಲಾ, ರಂಗಾಯಣ ರಘು ಕೂಡ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಈ ಹಾಡಿಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದು, 'ಕಿರಿಕ್ ಪಾರ್ಟಿ' ಖ್ಯಾತಿಯ ಧನಂಜಯ್ ರಂಜನ್ ಸಾಹಿತ್ಯ ಬರೆದಿದ್ದಾರೆ.