For Quick Alerts
  ALLOW NOTIFICATIONS  
  For Daily Alerts

  ಸರಳಾತಿ ಸರಳ ವ್ಯಕ್ತಿತ್ವದ ಅಣ್ಣಾವ್ರು ಇವರೇನಾ?

  By ಹೃದಯಶಿವ
  |
  <ul id="pagination-digg"><li class="previous"><a href="/music/one-morning-with-dr-rajkumar-by-hrudaya-shiva-076010.html">« Previous</a>

  ಸರಳಾತಿ ಸರಳ ವ್ಯಕ್ತಿತ್ವದ ಅಣ್ಣಾವ್ರು ಇವರೇನಾ? ಎನ್ನುವಷ್ಟರಮಟ್ಟಿಗೆ ನಾನು ಅಕ್ಷರಶಃ ತಲ್ಲಣಗೊಂಡಿದ್ದೆ. ಯಾರ ಕಾಲಿಗೂ ಬೀಳದ ನಾನು ಅವತ್ತು ಆ ಮೇರುಕಲಾವಿದನ ಪಾದಗಳೆಡೆಗೆ ಶಿರಬಾಗಿದ್ದು ಇಂದಿಗೂ ನನ್ನ ಪಾಲಿಗೆ ಅಚ್ಚರಿಯ ಸಂಗತಿ. ಅವರ ವಾತ್ಸಲ್ಯದ ಹಸ್ತ ನನ್ನ ಶಿರವನ್ನು ಸೋಕುತ್ತಿದ್ದಂತೆಯೇ ಒಂದು ಬಗೆಯ ಅತೀವ ಪುಳಕ ನನ್ನನ್ನು ಕದಲಿಬಿಟ್ಟಿತ್ತು.

  "ತಲ್ಲಣಿಸದಿರು ಕಂಡ್ಯ ತಾಳು ಮನವೇ ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ..." ಎಂದು ಆರಂಭವಾಗುವ ಕನಕದಾಸರ ಕೀರ್ತನೆಯನ್ನು ಅಣ್ಣಾವ್ರು ಒಳಗೆ ಭಾವತುಂಬಿ ಹಾಡುತ್ತಿದ್ದರು. ಗುರೂಜಿ ಟೇಕ್ ತಗೊಳ್ತಾ ಇದ್ದರು. ಲಿರಿಕ್ಸ್ ಶೀಟ್ ನ ಇನ್ನೊಂದು ಕಾಪಿ ನನ್ನ ಕೈಲಿತ್ತು. ಮೊದಲ ಕೆಲವು ಸಾಲುಗಳು ಮಾತ್ರ ಕನಕದಾಸರದ್ದಾಗಿದ್ದು, ಉಳಿದ ಸಾಲುಗಳನ್ನು ಕೆ.ಕಲ್ಯಾಣ್ ಬರೆದಿದ್ದರು.

  ಆ ದಿನ ಕಲ್ಯಾಣ್ ಬಂದಿರಲಿಲ್ಲ. ಹಾಗಾಗಿ, ಕನಕದಾಸರು ಹಾಗೂ ಕಲ್ಯಾಣ್ ಪರವಾಗಿ 'ಗಾಯಕ/ಗಾಯಕಿ ಶ್ರುತಿ,ತಾಳ, ಎಮೋಷನ್ನುಗಳ ಕಡೆ ಚಿತ್ತವನ್ನು ಕೇಂದ್ರೀಕರಿಸಿ ಹಾಡುತ್ತಿರಬೇಕಾದರೆ ಒಮ್ಮೊಮ್ಮೆ ಕಣ್ತಪ್ಪಿನಿಂದ ಕಾಗುಣಿತ ಅಥವಾ ಉಚ್ಚಾರಣಾ ದೋಷಗಳು ಸಂಭವಿಸುವುದುಂಟು' ಎಂಬ ಮಾತಿನನ್ವಯ ಎರಡೂ ಕಿವಿಗಳನ್ನು ತೆರೆದು ನಾನು ಕೂರಬೇಕಾಗಿತ್ತು.

  ಡಾ.ರಾಜ್ ಕುಮಾರ್ ಥರದ ಗಾಯಕರ ವಿಷಯದಲ್ಲಿ ಈ ಮೇಲ್ಕಾಣಿಸಿದ ಮಾತು ಅಷ್ಟು ಸಮಂಜಸವಲ್ಲ ಅಂತ ನನಗವತ್ತನಿಸಿತ್ತು. ಏಕೆಂದರೆ, ಅಣ್ಣಾವ್ರಿಗೆ ಒಲಿದಿದ್ದ ಭಾಷಾಶುದ್ಧತೆ, ಒಂದೊಂದು ಅಕ್ಷರವನ್ನೂ ಉಚ್ಚರಿಸುವಾಗಿನ ಜಾಗ್ರತೆ ಅಂಥಾದ್ದು. ಸಾಹಿತ್ಯವನ್ನು ಜೀರ್ಣಿಸಿಕೊಂಡು ಅದರೊಳಗಿನ ಜೀವಂತಸೆಲೆಗೆ ಕುಂದು ಬಾರದಂತೆ ಮೈದುಂಬಿ ಹಾಡಿ ತಕ್ಕ ನ್ಯಾಯ ಒದಗಿಸಬಲ್ಲ ಕನ್ನಡದ ಕೆಲವೇ ಕೆಲವು ಗಾಯಕರಲ್ಲಿ ರಾಜಣ್ಣ ಪ್ರಮುಖರು. ಆದರೂ, ಅಂಥದೊಂದು ಅಪೂರ್ವ ಅನುಭವ ನನ್ನ ಪಾಲಿಗೆ ಸದಾ ಜೋಪಾನ ಮಾಡಿಕೊಳ್ಳಬೇಕಾದುದೇ.

  ಇಷ್ಟಕ್ಕೂ ಅಣ್ಣಾವ್ರು ಹಾಡಿದ್ದ ಅನೇಕ ಗೀತೆಗಳನ್ನು ಆವರೆಗೆ ರೇಡಿಯೋದಲ್ಲಿ, ಟಿವಿಯಲ್ಲಿ, ಯಾರಾದರೂ ಅಯ್ಯಪ್ಪಸ್ವಾಮೀ ಮಾಲೆ ಹಾಕಿಕೊಂಡಲ್ಲಿ, ದೇವಸ್ಥಾನಗಳಲ್ಲಿ, ಹಬ್ಬ, ಮದುವೆ, ಜಾತ್ರೆಗಳಂಥ ಸಂದರ್ಭಗಳಲ್ಲಿ, ಗಣೇಶನ ಉತ್ಸವ, ರಾಜ್ಯೋತ್ಸವಗಳ ನೆಪದ ಆರ್ಕೆಸ್ಟ್ರಾಗಳಲ್ಲಿ ಮಾತ್ರ ಕೇಳಿದ್ದುಂಟು. ಆನಂದಿಸಿದ್ದುಂಟು. ಅಂಥ ಎಲ್ಲಾ ಸಂದರ್ಭಗಳಲ್ಲಿ ರಾಜಣ್ಣ ಪಕ್ಕದಲ್ಲೇ ಕುಳಿತು ಹಾಡ್ತಾ ಇದಾರೋ ಏನೋ! ಅನ್ನುವಷ್ಟರಮಟ್ಟಿಗೆ ಹೃದಯ ಗೆದ್ದುಬಿಡುತ್ತಿದ್ದರು. ನನ್ನನ್ನು ಸಂಪೂರ್ಣ ತಮ್ಮ ಸುಪರ್ದಿಗೆ ಎಳೆದುಕೊಂಡುಬಿಡುತ್ತಿದ್ದರು. ಅಂಥ ಸಾಕ್ಷಾತ್ ರಾಜ್ ಕುಮಾರ್ ರವರು ಹಾಡುವುದನ್ನು ಯಥಾವತ್ತು ಕಣ್ತುಂಬಿಕೊಳ್ಳುವುದಿದೆಯಲ್ಲಾ ಅಂಥ ಅದೃಷ್ಟ ಎಲ್ಲರಿಗೂ ಸಿಗುವಂಥದಲ್ಲ. ಆ ಮಟ್ಟಿಗೆ ನಾನು ಭಾಗ್ಯವಂತ. (ಕೃಪೆ: ಪಂಜು)

  <ul id="pagination-digg"><li class="previous"><a href="/music/one-morning-with-dr-rajkumar-by-hrudaya-shiva-076010.html">« Previous</a>
  English summary
  Kannada lyricist Hrudaya Shiva shares with some of his fond memories of legendary actor Dr.Rajkumar, the most iconic Kannadiga who has won the hearts of generations of Kannadigas with his immense acting and singing abilities and his simplistic fortitude. The authors heartfelt expressions and explorations are presented here.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X