»   » 'ಆರಂಭ' ಚಿತ್ರದಲ್ಲೇನಿದು ಬಳುಕುವ ಸೊಂಟದ ನಂಟು

'ಆರಂಭ' ಚಿತ್ರದಲ್ಲೇನಿದು ಬಳುಕುವ ಸೊಂಟದ ನಂಟು

By: ಉದಯರವಿ
Subscribe to Filmibeat Kannada

ಆರಂಭ ಚಿತ್ರದ ನಿರ್ದೇಶಕರಾದ ಎಸ್ ಅಭಿ ಹನಕೆರೆ ಯವ್ರು,ತಮ್ಮ ಚಿತ್ರದ ಹಾಡುಗಳು ಹುಟ್ಟಿದ ಬಗ್ಗೆ ಈ ಮೊದಲೇ ಹಂಚಿಕೊಂಡಿದ್ದರು. ಈ ಬಾರಿ ಅವರು ಚಿತ್ರದ ಇನ್ನೊಂದು ಸೂಪರ್ ಹಿಟ್ ಆದ ಹಾಡಿನ ಬಗ್ಗೆ ಹೇಳಿದ್ದಾರೆ.

ಲಾಂಗು,ಮಚ್ಚು,ಹಿಡಿದುಕೊಂಡು ಓಡಾಡಿದ್ದನ್ನ, ಅನಾಥ ಮಕ್ಕಳ ಸೇವೆ ಮಾಡೋದನ್ನ, ರೇಪ್ ನಡೆಯುವಾಗ, ದಿಢೀರನೆ ಬಂದು ಕಾಪಾಡುವ,
ಇನ್ನೂ ಏನೇನೋ ರೀತಿಯಲ್ಲಿ, ತೋರಿಸೋದು ಹೀರೋಹಿಸಂ ಅಲ್ಲ.

ಎಂತಹ ಕಷ್ಟ ಪರಿಸ್ಥಿತಿಯಲ್ಲೂ, ಪಾಸಿಟಿವ್ ಅಗಿರೊದನ್ನ, ತೋರಿಸೋದು ಹೀರೋಹಿಸಂ! ಎಂಬ ಸಂದರ್ಭಕ್ಕೆ ಹಾಡೊಂದು ಬೇಕು, ಅನ್ನೋದನ್ನ
ಗುರುಕಿರಣ್ ಹತ್ತಿರ ಚರ್ಚಿಸಿದಾಗ, ಅವರು ಯಾವತ್ತೋ, ಇವರ ಮುಂದೆ ಗುನುಗಿದ್ದ ಹಾಡಿನ ಪಲ್ಲವಿ,"ಹಾಡಿ ಹಾಡಿ ರೇಡಿಯೋಗೆ, ಬೋರು ಆಗೋದಿಲ್ಲ, ಕೂಡಿ ಕೂಡಿ ಪ್ರೇಮಿಗಳಿಗೆ ಸುಸ್ತೆ ಆಗೋದಿಲ್ಲ" ಪಾಸಿಟಿವ್ ಲೈನ್ಸ್ ಚೆನ್ನಾಗಿವೆ, ಇದನ್ನು ಕಂಪೋಸ್ ಮಾಡಿ ಚೆನ್ನಾಗಿ ಇರುತ್ತೆ ಎಂದು ತಮ್ಮ ಇಂಗಿತ ವ್ಯಕ್ತಪಡಿಸಿದ್ದಾರೆ. ['ಆರಂಭ' ಚಿತ್ರದ ಟೀಸರ್ ನಲ್ಲಿ ಇದೇನಿದು 'ಆ' ದೃಶ್ಯ?]

Aarambha

"ಅದು ಯಾವತ್ತೋ ಮಾಡಿದ್ದ ಹಾಡಿನ ಸಾಲು, ಯಾರಿಗೂ ಇಷ್ಟ ಆಗಿರ್ಲಿಲ್ಲ, ಹಾಗಾಗಿ ಅದನ್ನ ಡೆವೆಲಪ್ ಮಾಡಿರ್ಲಿಲ್ಲ, ಅದರಲ್ಲೂ ನಾನು ಇದುವರೆಗೂ, ಲವ್ ಹಾಡಿನ ಬಗ್ಗೆ, ಪಾಸಿಟಿವ್ ಆಗಿ ಬರೆದಿಲ್ಲ, ಅದು ಬೇಡ" ಎಂದಿದ್ದರು ಗುರುಕಿರಣ್.

ನಮ್ಮ ಆರಂಭ ಚಿತ್ರದಲ್ಲಿ, ನಿಮ್ಮ ಬಿನ್ನವಾದ ಆ ಹಾಡು ಕೂಡ 'ಆರಂಭ' ಆಗಲಿ, ಈ ಹಾಡನ್ನು ನೀವೇ ಬರೆದು, ಹಾಡಬೇಕು ಎಂದು ಪಟ್ಟು ಹಿಡಿದು ಕುಳಿತಾಗ, ಗುರುಕಿರಣ್ ಹಾಡನ್ನು ಬರೆದು, ಹಾಡಿಬಿಟ್ರಂತೆ. ಗುರುಕಿರಣ್ ಮೊದಲ ಬಾರಿಗೆ ಬರೆದಂತಹ, ಲವ್ ಹಾಡು ಇದಾಗಿದೆ.

ಈ ಹಾಡನ್ನು,ತುಂಬಾ ಸ್ಟೈಲಿಶ್ ಆಗಿ, ಮತ್ತು ಕಲರ್ ಫುಲ್ ಆಗಿ ಚಿತ್ರೀಕರಿಸುವ ದೃಷ್ಟಿಯಿಂದ, ಈ ಹಾಡಿನ ಡ್ಯಾನ್ಸ್ ಮಾಸ್ಟರ್ ಸಂದೀಪ್ ರವರನ್ನ ಭೇಟಿ ಮಾಡಿ, ಸಹ ನೃತ್ಯಗಾರ್ತಿಯರ ಆಯ್ಕೆ ಮಾಡಿ, ಆವ್ರಿಗೆಲ್ಲ ಪ್ರ್ಯಾಕ್ಟೀಸ್ ಮಾಡಿಸಿ, ಶೂಟಿಂಗ್ ಸ್ಪಾಟ್ ಗೆ ಕರೆದೊಯ್ದುರು. ಇದಕ್ಕೆ ಬೇಕಾದ ರೇಡಿಯೋ ಮಾಡೆಲ್ನಾ,ಕಲಾ ನಿರ್ದೇಶಕ ಆರೋಗ್ಯ ಸ್ವಾಮಿ ಯವ್ರು ಅದ್ಭುತವಾಗಿ ಮಾಡಿಕೊಟ್ಟಿದ್ದರು.

(ನೀವು ಹಾಡಿನ ವೀಡಿಯೋ ಸಾಂಗ್ ನೋಡಿದ್ರೆ ಗೊತ್ತಾಗುತ್ತೆ) ಹಾಡಿನಲ್ಲಿ ಎಲ್ಲ ನೃತ್ಯಗಾರ್ತಿಯರ ಕೈಯಲ್ಲಿ ಎಲ್‌ಸಿಡಿ ಟಿವಿ ಹಿಡಿಸಿ, ಅದರಲ್ಲಿ
ನಾಯಕಿಯ ಚಿತ್ರ ಬರುವಂತೆ, ಚಿತ್ರಿಸುವ ಉಪಾಯ, ಹೊಳೆದಿದ್ದ ಅಭಿಯವ್ರಿಗೆ, ನಿರ್ಮಾಪಕರ ಸಹಕಾರ ಸಿಗಲಿಲ್ಲ.


ಆ ಬೇಸರದಲ್ಲಿ ಇದ್ದಾಗ, ಅದಕ್ಕೆ ತಕ್ಷಣ ಅವ್ರಿಗೆ ಹೊಳೆದಿದ್ದು,ಬಿಸಿಲಲ್ಲೂ ಹೊಳೆಯುತ್ತಿದ್ದ, ನೃತ್ಯಗಾರ್ತಿಯರ ಬಿಳಿ ಸೊಂಟದ ಮೇಲೆನೇ, ಟೀವೀ ಚ್ಯಾನೆಲ್ ಲೋಗೋ ಬಿಡಿಸಿ ತೋರಿಸೋದು ಅಂತಾ! ಅದಕ್ಕೆ ನೃತ್ಯಗಾರ್ತಿಯರು ಒಪ್ಪಲಿಲ್ಲ,"ಚಿತ್ರ ಮಾಡುವುದು ನಟ ನಟಿಯರಿಗೆ ಸಂಭಾವನೆ ಕೊಡೋಕೆ ಅಲ್ಲ, ಜನಗಳಿಗೆ ಮನರಂಜನೆ ನೀಡುವುದಕ್ಕೆ" ಎಂದು ಅಭಿಯವ್ರು ಹೇಳಿ ಒಪ್ಪಿಸಿ,ಆರೋಗ್ಯ ಸ್ವಾಮಿ ಎಲ್ಲರ ಸೊಂಟದ ಮೇಲೆ ಟಿವಿ ಚ್ಯಾನೆಲ್ ಗಳ ಲೋಗೋ ಚಿತ್ತಾರ ಬಿಡಿಸಿದರು.

ನಂತರ ಎಲ್ಲರೂ ಸಂತೋಷವಾಗಿ ಹಾಡಿನ ಚಿತ್ರೀಕರಣಕ್ಕೆ ಸಹಕರಿಸಿದರು, ಹಾಡಿನ ಕೊನೆಯಲ್ಲಿ ಬಾಟಲ್ ಹೊಡೆಯುವ ದೃಶ್ಯದಲ್ಲಿ ಕೆಲ ನೃತ್ಯಗಾರ್ತಿಯರಿಗೆ, ಗಾಯಗಳು ಸಹ ಆಯಿತಂತೆ. ಕೊನೆಗೆ ಹಾಡಿನ ವೀಡಿಯೋ ನೋಡಿ, ಸಣ್ಣ ಪುಟ್ಟ ಲೋಪ ದೋಷಗಳಿದ್ದರೂ, ತುಂಬಾ ಖುಷಿಪಟ್ಟ ಅಭಿಯವರು ತಮ್ಮ ಅನುಭವ ಮೆಲುಕು ಹಾಕಿದ್ದಾರೆ.

ಗುರುಕಿರಣ್ ತಮ್ಮ, ಶೋಗಳಲ್ಲಿ, ಈ ಹಾಡನ್ನು ಹಾಡುವುದರ ಮೂಲಕ ಚಿತ್ರಕ್ಕೆ ಪ್ರೋತ್ಸಾಹ ಕೊಡುತ್ತಾ ಬಂದಿದ್ದಾರೆ. ಹೊಸಬರೊಂದಿದೆ ಗುರುಕಿರಣ್ ಹೆಚ್ಚು ಉತ್ಸಾಹದಿಂದ, ಒಂಚೂರು ಬೇಧವಿಲ್ಲದೆ, ಸಂಗೀತ ಸಂಯೋಜನೆ ಮಾಡಿ ಕೊಟ್ಟಿದ್ದಕ್ಕೆ,ತುಂಬಾ ಖುಷಿಯಿದೆ ಎನ್ನುತ್ತಾರೆ ಅಭಿ.

"ಹೊಸಬರೊಂದಿಗೆ ನಾನು ಹೊಸಬನಾಗಿ ಕೆಲಸ ಮಾಡಲು ಇಚ್ಚಿಸುವುದರಿಂದ, ಹೊಸತನ ತುಂಬಾ ಖುಷಿ ಕೊಡುತ್ತೆ"ಅಂತಾ ಗುರುಕಿರಣ್ ಸಹ ಕಣ್ಣು ಮಿಟುಕಿಸಿ ಹೇಳುತ್ತಾರೆ! ಹಾಡಿನ ವೀಡಿಯೋ ನೋಡಿದ ಯಾರೋ ಪತ್ರಿಕಾ ಸಿಬ್ಬಂದಿ,"ಏನ್ರೀ ಟಿವಿ ಚಾನಲ್ ರವರನ್ನ ಸೊಂಟದ ಮೇಲೆ ಕೂರಿಸಿದಿರಾ?" ಎಂದು ಛೇಡಿಸಿದ್ದನ್ನ ನೆನಪು ಮಾಡಿಕೊಳ್ಳುತ್ತಾರೆ.

ಹಾಡನ್ನು ನೋಡಿದವ್ರೆಲ್ಲ ತಮ್ಮ ಮನೆಯಲ್ಲಿದ್ದ ಹಳೆಯ ರೇಡಿಯೋ ಗಳನ್ನು ನೆನಪು ಮಾಡಿಕೊಳ್ಳೋದು ಗ್ಯಾರೆಂಟೀ....ನೀವು ಸಾಂಗ್ ನೋಡಿಲ್ಲ ಅಂದ್ರೆ,ಒಂದ್ಸಲ ನೋಡ್ಕೊಂಡು ಅಭಿಪ್ರಾಯ ತಿಳಿಸಿ. ಚಿತ್ರ ಎಲ್ಲಾ ಹಂತಗಳನ್ನು ಪೂರೈಸಿ, ಮುಂದಿನ ತಿಂಗಳಲ್ಲಿ ಬಿಡುಗಡೆ ಕಾಣಲಿದೆ.

English summary
Here is making of the song from the movie "Aarambha, The last chance", music by Gurukiran. The movie directed by S Abhi Hanakere and produced by D Ganesh, V Nagenahalli.
Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada