ಭಾರತ ರತ್ನ ಲತಾ ಮಂಗೇಶ್ಕರ್‌ಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ: ದೇವರಲ್ಲಿ ಪ್ರಾರ್ಥಿಸಿ ಎಂದ ವೈದ್ಯ
ಭಾರತದ ಸುಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್ ಕೊರೊನಾ ಸೋಂಕು ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಪರೀಕ್ಷಿಸಿದ ಬಳಿಕ ಲತಾ ಮಂಗೇಶ್ಕರ್‌ಗೆ ಕೊರೊನಾ ಸೋಂಕು ತಗುಲಿರುವುದು ಬೆಳಕಿಗೆ ಬಂದಿತ್ತು. ಅಂದಿನಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆ ವೈದ್ಯರು ಲತಾ ಮಂಗೇಶ್ಕರ್ ಅವರನ್ನು ತ್ರೀವಾ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡುತ್ತಿದ್ದಾರೆ.
Recommended Video
ಜನವರಿ 8ರಂದು ಲತಾ ಮಂಗೇಶ್ಕರ್ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಕೊರೊನಾ ಸೋಂಕು ತಗುಲಿರುವುದು ಖಾತ್ರಿಯಾಗಿದ್ದು, ಇಲ್ಲಿಂದ ಲತಾ ಮಂಗೇಶ್ಕರ್ ಅವರಿಗೆ ತ್ರೀವಾ ನಿಗಾ ಘಟಕದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಲತಾ ಮಂಗೇಶ್ಕರ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ. ಪ್ರತಿತ್ ಸಂದನಿ ಗಾಯಕಿಯ ಆರೋಗ್ಯದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಭಾರತ ರತ್ನ ಲತಾ ಮಂಗೇಶ್ಕರ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ
ಲತಾ ಮಂಗೇಶ್ಕರ್ ಅವರ ವಯಸ್ಸು92. ಹೀಗಾಗಿ ಕೊರೊನಾ ಸೋಂಕು ಧೃಡಪಟ್ಟಿದ್ದ ದಿನದಿಂದಲೇ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಲತಾ ಮಂಗೇಶ್ಕರ್ ಆಸ್ಪತ್ರೆಗೆ ದಾಖಲಾಗಿ ಇಂದಿಗೆ 12 ದಿನ. ಇನ್ನೂ ಆವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿಲ್ಲ. ಹೀಗಾಗಿ ಐಸಿಯುನಲ್ಲಿಯೇ ಚಿಕಿತ್ಸೆ ಮುಂದುವರೆಸುತ್ತಿರುವುದಾಗಿ ವೈದ್ಯ ಡಾ. ಪ್ರತಿತ್ ಸಂದನಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಲತಾ ಮಂಗೇಶ್ಕರ್ ಅವರಿಗೆ ಉಸಿರಾಟದ ಸಮಸ್ಯೆ ಕೂಡ ಇದೆ. ಇದರ ಜೊತೆನೇ ಕೊರೊನಾ ಸೋಂಕು ತಗುಲಿರುವುದರಿಂದ ವೈದ್ಯರು ಐಸಿಯುಬಲ್ಲಿ ಚಿಕಿತ್ಸೆಯನ್ನು ನೀಡಬೇಕಿದೆ. ಅವರು ಸಂಪೂರ್ಣ ಗುಣಮುಖರಾಗಿ ಮನೆಗೆ ತಲುಪಲು ಇನ್ನೂ ಸಾಕಷ್ಟು ಸಮಯ ಹಿಡಿಯಬಹುದು ಎಂದು ವೈದ್ಯರ ಈ ಹಿಂದೆನೇ ಹೇಳಿಕೆ ನೀಡಿದ್ದರು. ಅಲ್ಲಿಂದ ಲತಾ ಮಂಗೇಶ್ಕರ್ ಆರೋಗ್ಯದ ಬಗ್ಗೆ ಬಾಲಿವುಡ್ ಮಂದಿಯ ಆತಂಕಕ್ಕೆ ಕಾರಣವಾಗಿದೆ.
ಬೇಗ ಗುಣಮುಖರಾಗಲು ದೇವರಲ್ಲಿ ಪ್ರಾರ್ಥಿಸುವಂತೆ ಮನವಿ
ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಮೂಲಗಳು ಲತಾ ಮಂಗೇಶ್ಕರ್ ಅವರಿಗೆ ಇನ್ನೂ 10 ರಿಂದ 12 ದಿನಗಳ ಕಾಲ ಐಸಿಯುನಲ್ಲಿಯೇ ಚಿಕಿತ್ಸೆ ಮುಂದುವರೆಯುವ ಸಾಧ್ಯತೆ ಎಂದು ಈ ಹಿಂದೆ ತಿಳಿಸಿದ್ದರು. ಆದರೆ, ವೈದ್ಯರು ಗಾಯಕಿಯ ಆರೋಗ್ಯ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿ ಎಂದು ವೈದ್ಯರು ಎಂದು ಹೇಳಿದ್ದಾರೆ. ವೈದ್ಯರು ಲತಾ ಮಂಗೇಶ್ಕರ್ ಅವರ ಆರೋಗ್ಯದ ಬಗ್ಗೆ ಆಸ್ಪತ್ರೆ ಮೂಲಗಳು ಖಚಿತ ಮಾಹಿತಿ ನೀಡಿಲ್ಲ.

ಲತಾ ಮಂಗೇಶ್ಕರ್ ಸುಮಾರು ಏಳು ದಶಕಗಳ ಕಾಲ ಸುಮಾರು 30 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿ ನೀಡಿದ್ದಾರೆ. ಲತಾ ಮಂಗೇಶ್ಕರ್ ಅವರ ಧ್ವನಿಗೆ ಮರುಳಾಗದೆ ಇರುವವರೇ ಇಲ್ಲ. ಲತಾ ಮಂಗೇಶ್ಕರ್ ಮೂರು ರಾಷ್ಟ್ರ ಪ್ರಶಸ್ತಿ, ದಾದಾ ಸಾಹೇಬ್ ಪ್ರಶಸ್ತಿ, ಪದ್ಮ ಭೂಷಣ, ಪದ್ಮ ವಿಭೂಷಣ, ಭಾರತ ರತ್ನ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಲತಾ ಮಂಗೇಶ್ಕರ್ ಸಾಧನೆಗೆ ಲಭಿಸಿದೆ.


Click it and Unblock the Notifications











