ದಸರಾ ಸಂಭ್ರಮದಲ್ಲಿ ಪೃಥ್ವಿ-ಮಿಲನಾ ಸಿನಿಮಾ 'F0R REGN'ಗೆ ಬಂಪರ್ ಗಿಫ್ಟ್
'ದಿಯಾ' ಹಾಗೂ 'ಲವ್ ಮಾಕ್ಟೇಲ್' ಅಂತ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿರೋರು ಒಟ್ಟಿಗೆ ಸೇರಿ ಒಂದು ಸಿನಿಮಾ ಮಾಡುತ್ತಿರೋದು ಗೊತ್ತೇ ಇದೆ. 'ಲವ್ ಮಾಕ್ಟೇಲ್' ಹೀರೊಯಿನ್ ಮಿಲನ ನಾಗರಾಜ್ ಹಾಗೂ 'ದಿಯಾ' ಹೀರೊ ಪೃಥ್ವಿ ಅಂಬರ್ ಕಾಂಬಿನೇಷನ್‌ನಲ್ಲಿ ಸಿನಿಮಾ ತೆರೆಬರೋಕೆ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಅಂದ್ಹಾಗೆ ಮಿಲನ ನಾಗರಾಜ್ ಹಾಗೂ ಪೃಥ್ವಿ ಅಂಬರ್ ಅಭಿನಯದ ಆ ಸಿನಿಮಾವೇ 'F0R REGN'. ಈ ಸಿನಿಮಾ ದಸರಾ ಹಬ್ಬದ ಸಂಭ್ರಮದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಅದಕ್ಕೆ ಕಾರಣ ಸಿನಿಮಾ ಹಾಡುಗಳು.
ನಟ ಪೃಥ್ವಿ ಅಂಬರ್ ಹಾಗೂ ಮಿಲನಾ ನಾಗರಾಜ್ ಕಾಂಬಿನೇಷನ್ ಸಿನಿಮಾ 'F0R REGN' (ಫಾರ್ ರಿಜಿಸ್ಟರೇಷನ್) ಶೂಟಿಂಗ್ ಬಹುತೇಕ ಪೂರ್ಣಗೊಂಡಿದೆ. ಸದ್ಯ ಚಿತ್ರತಂಡ ಒಂದು ಹಾಡಿನ ಚಿತ್ರೀಕರಣವನ್ನೇ ಬಾಕಿ ಉಳಿಸಿಕೊಂಡಿದೆ. ಇದೇ ವೇಳೆ ಸಿನಿಮಾದ ಹಾಡುಗಳು ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ.

ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಜೋಡಿಯಾಗಿ ನಟಿಸಿರುವ 'F0R REGN' ಸಿನಿಮಾದ ಹಾಡುಗಳು ಭಾರಿ ಮೊತ್ತಕ್ಕೆ ಸೇಲ್ ಆಗಿವೆಯಂತೆ. ಜಂಕಾರ್ ಮ್ಯೂಸಿಕ್ ಸಂಸ್ಥೆ ದುಬಾರಿ ಮೊತ್ತ ನೀಡಿ ಈ ಹಾಡುಗಳನ್ನು ಖರೀದಿಸಿದೆ ಎನ್ನಲಾಗಿದೆ.
'F0R REGN' (ಫಾರ್ ರಿಜಿಸ್ಟರೇಷನ್) ಸಿನಿಮಾದಲ್ಲಿ ಒಟ್ಟು ಆರು ಹಾಡುಗಳಿವೆ. ಕನ್ನಡ ಚಿತ್ರರಂಗದ ಸೂಪರ್ ಹಿಟ್ ಹಾಡುಗಳನ್ನು ನೀಡಿರುವ 'ಬಹದ್ದೂರ್' ಚೇತನ್ ಕುಮಾರ್, ಕವಿರಾಜ್ ಹಾಗೂ ನಾಗಾರ್ಜುನ ಶರ್ಮ ಬರೆದಿದ್ದಾರೆ. ಇನ್ನು ವಿಜಯ್ ಪ್ರಕಾಶ್, ಚಂದನ್ ಶೆಟ್ಟಿ ಹಾಗೂ ವಾಸುಕಿ ವೈಭವ್ ಈ ಹಾಡುಗಳನ್ನು ಹಾಡಿದ್ದಾರೆ. ಆರ್.ಕೆ.ಹರೀಶ್ ಈ ಸಿನಿಮಾದ ಸಂಗೀತ ನಿರ್ದೇಶಕ.
ಸದ್ಯ ಉಳಿದಿರೋ ಒಂದೇ ಒಂದು ಹಾಡಿನ ಚಿತ್ರೀಕರಣ ಶೀಘ್ರದಲ್ಲಿ ಮುಗಿಸಿ, ಬಿಡುಗಡೆ ಸಿದ್ಧತೆಗಳನ್ನು ಮಾಡಿಕೊಳ್ಳಲಿದೆ. ಈಗ ಡಬ್ಬಿಂಗ್‌ನಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಬೆಂಗಳೂರು, ಉಡುಪಿ, ಮಂಗಳೂರು ಹಾಗೂ ಸಕಲೇಶಪುರದಲ್ಲಿ ಶೂಟಿಂಗ್ ನಡೆಯಲಿದೆ.

ಈ ಸಿನಿಮಾದಲ್ಲಿ ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು ನಟಿಸಿದ್ದಾರೆ. ಎನ್ .ನವೀನ್ ರಾವ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನವೀನ್ ದ್ವಾರಕನಾಥ್ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರದ್ದೇ. ಅಭಿಷೇಕ್ ಕಲ್ಲತ್ತಿ- ಅಭಿಷೇಕ್ ಕಾಸರಗೋಡು ಛಾಯಾಗ್ರಹಣವಿದೆ.


Click it and Unblock the Notifications











