For Quick Alerts
  ALLOW NOTIFICATIONS  
  For Daily Alerts

  ಬಾಲಿವುಡ್‌ನ ಖ್ಯಾತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೊನಾಗೆ ಬಲಿ

  |

  ಬಾಲಿವುಡ್‌ನ ನದೀಮ್-ಶ್ರವಣ್ ಖ್ಯಾತಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೊನಾಗೆ ಬಲಿಯಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಬಂದಿದ್ದರಿಂದ ಶ್ರವಣ್ ಮುಂಬೈನ ಎಸ್ ಎಲ್ ರಹೇಜಾ ಆಸ್ಪತ್ರೆಗೆ ದಾಖಲಾಗಿದ್ದರು.

  ಶ್ರವಣ್ ಆರೋಗ್ಯ ಸ್ಥಿತಿ ತೀರ ಗಂಭೀರವಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ನಿನ್ನ (ಏಪ್ರಿಲ್ 23) ರಾತ್ರಿ ಕೊನೆಯುಸಿರೆಳೆದಿದ್ದಾರೆ. ಶ್ರವಣ್ ಮೃತಪಟ್ಟ ವಿಚಾರವನ್ನು ಸಿನಿಮಾ ನಿರ್ದೇಶಕ ಅನಿಲ್ ಶರ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಶ್ರವಣ್ ಸಾವಿಗೆ ಸಂತಾಪ ಸೂಚಿಸಿರುವ ಅನಿಲ್ ಶರ್ಮಾ ಇದು ತುಂಬಾ ದುಃಖಕರ ವಿಚಾರ ಎಂದು ಹೇಳಿದ್ದಾರೆ.

  ಸಿನಿಮಾಕ್ಕೆ ಬಳಸುತ್ತಿದ್ದ ವ್ಯಾನಿಟಿ ವ್ಯಾನ್‌ಗಳು ಕೋವಿಡ್ ರೋಗಿಗಳ ಚಿಕಿತ್ಸೆಗೆಸಿನಿಮಾಕ್ಕೆ ಬಳಸುತ್ತಿದ್ದ ವ್ಯಾನಿಟಿ ವ್ಯಾನ್‌ಗಳು ಕೋವಿಡ್ ರೋಗಿಗಳ ಚಿಕಿತ್ಸೆಗೆ

  66 ವರ್ಷದ ಸಂಗೀತ ನಿರ್ದೇಶಕ ಶ್ರವಣ್ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಖ್ಯಾತ ಗಾಯಕಿ ಶ್ರೇಯಾ ಘೋಷಲ್ ಟ್ವೀಟ್ ಮಾಡಿ, 'ಶ್ರವಣ್ ನಿಧನರಾದ ಸುದ್ದಿ ಕೇಳಿ ಆಘಾತವಾಗಿದೆ. ಅಪ್ಪಟ ವಿನಮ್ರ ಮನುಷ್ಯ. ಸಂಗೀತ ಲೋಕದಲ್ಲಿ ಅತೀ ದೊಡ್ಡ ಸಂಯೋಜಕರಲ್ಲಿ ಒಬ್ಬರಾಗಿದ್ದರು. ದುಃಖ ಬರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ' ಎಂದು ಟ್ವೀಟ್ ಮಾಡಿದ್ದಾರೆ.

  ಶ್ರವಣ್ ರಾಥೋಡ್ 90ರ ದಶಕದಲ್ಲಿ ಪ್ರಸಿದ್ಧ ಸಂಗೀತ ನಿರ್ದೇಶಕರಾಗಿದ್ದರು. ಆಶಿಕಿ, ಸಾಜನ್, ಹಮ್ ಹೈ ರಹಿ ಪ್ಯಾರ್ ಕಿ, ಪರ್ದೇಸ್, ರಾಜಾ ಹಿಂದೀಸ್ತಾನಿ ಸೇರಿದಂತೆ ಅನೇಕ ಸೂಪರ್ ಹಿಟ್ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ.

  English summary
  Famous Music Director Shravan Rathod passes away due to Corona.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X