'ಖಡಕ್ ಹಳ್ಳಿ ಹುಡುಗರು': ರಾಘವೇಂದ್ರ ರಾಜಕುಮಾರ್ ದನಿಯಲ್ಲಿ ಕನ್ನಡಾಭಿಮಾನದ ಹಾಡು

By ಫಿಲ್ಮಿಬೀಟ್ ಡೆಸ್ಕ್

ರಾಘವೇಂದ್ರ ರಾಜ್‌ಕುಮಾರ್ ಅವರು ಬಹುದಿನಗಳ ಬಳಿಕ ಹಾಡಿರುವ ಕನ್ನಡಾಭಿಮಾನ ತುಂಬಿದ ಹಾಡೊಂದು ಬಿಡುಗಡೆ ಆಗಿದ್ದು ಮೆಚ್ಚುಗೆಗೆ ಪಾತ್ರವಾಗಿದೆ.

'ಖಡಕ್ ಹಳ್ಳಿ ಹುಡುಗರು' ಸಿನಿಮಾದಲ್ಲಿ ರಾಘವೇಂದ್ರ ರಾಜ್‌ಕುಮಾರ್ ಅವರು 'ಕನ್ನಡಕೆ ಮೊದಲ ಗೌರವ' ಎಂಬ ಹಾಡೊಂದನ್ನು ಹಾಡಿದ್ದು, ಹಾಡು ಎರಡು ದಿನಗಳ ಹಿಂದೆಯಷ್ಟೆ ಯೂಟ್ಯೂಬ್‌ನಲ್ಲಿ ಬಿಡುಗಡೆ ಆಗಿದೆ.

ಹಳ್ಳಿ ಹಿನ್ನೆಲೆಯಿಂದ ಬಂದಿರುವ ಎಂ ಯು ಪ್ರಸನ್ನ ‌ಹಳ್ಳಿ ನಿರ್ದೇಶಿಸಿರುವ 'ಖಡಕ್ ಹಳ್ಳಿ ಹುಡುಗರು' ಸಿನಿಮಾಕ್ಕೆ ರಾಘವೇಂದ್ರ ರಾಜ್‌ಕುಮಾರ್ ಹಾಡಿರುವ ಕನ್ನಡಾಭಿಮಾನದ ಹಾಡು ಗಣರಾಜ್ಯೋತ್ಸವದ ಶುಭದಿನ ನೆರವೇರಿತು. ಖ್ಯಾತ ನಿರ್ಮಾಪಕ ರೆಹಮಾನ್ ಹಾಡನ್ನು ಬಿಡುಗಡೆ ಮಾಡಿದರು. ಹಾಡಿಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

 Raghavendra Rajkumar Sang A New Song For Kadak Halli Hudugaru Movie
''ನಾನು ಮೂಲತಃ ಹಳ್ಳಿಯವನು. ಕೊರೋನ ಲಾಕ್ ಡೌನ್ ಸಮಯದಲ್ಲಿ ಹುಟ್ಟಿದ ಕಥೆಯಿದು. ಪಕ್ಕಾ ಹಳ್ಳಿ ಸೊಗಡಿನ ಸಿನಿಮಾ. ಎಂಟು ಮುಖ್ಯ ಪಾತ್ರಗಳನ್ನಿಟ್ಟುಕೊಂಡು ಈ ಸಿನಿಮಾ ಮಾಡುತ್ತಿದ್ದೇನೆ. ಚಿತ್ರದಲ್ಲಿ ಆರು ಹಾಡುಗಳಿರುತ್ತದೆ. ಆರು ಹಾಡುಗಳನ್ನು ನಾನೇ ಬರೆದಿದ್ದೇನೆ. ಅದರಲ್ಲಿ "ಕನ್ನಡಕ್ಕೆ ಮೊದಲ ಗೌರವ" ಎಂಬ ಮೊದಲ ಹಾಡನ್ನು ರಾಘವೇಂದ್ರ ರಾಜಕುಮಾರ್ ಹಾಡಿದ್ದಾರೆ. ಅವರಿಗೆ ಧನ್ಯವಾದ. ಈ ಹಾಡನ್ನು ಹಾಡುವಂತೆ ರಾಘಣ್ಣ ಅವರಿಗೆ ಪ್ರೇರಿಪಿಸಿದ ಪುನೀತ್ ರಾಜಕುಮಾರ್ ಅವರಿಗೆ ವಿಶೇಷ ಧನ್ಯವಾದ. ಅಪ್ಪು ಅವರ ಪಿ.ಆರ್.ಕೆ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಮಾರ್ಚ್ ನಲ್ಲಿ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ'' ಎಂದು ನಿರ್ದೇಶಕ ಪ್ರಸನ್ನ ಹಳ್ಳಿ ತಿಳಿಸಿದರು.

''ನನ್ನ ನೋಡಿದರೆ ಹಳ್ಳಿ ಹುಡುಗನ ತರಹ ಕಾಣುವುದಿಲ್ಲ. ನಿರ್ದೇಶಕರು ನನಗೆ ಹಳ್ಳಿಹುಡುಗನ ಗೆಟಪ್ ಹಾಕಿ ನೋಡಿ ಆಯ್ಕೆ ಮಾಡಿಕೊಂಡರು. ಈಗ ಬಿಡುಗಡೆಯಾಗಿರುವ ಹಾಡು ಇಷ್ಟು ಚೆನ್ನಾಗಿ ಬಂದಿದೆ ಅಂದರೆ ಪುನೀತ್ ಸರ್ ಕಾರಣ. ಅವರ ಸಹಾಯ ಮರೆಯುವ ಹಾಗಿಲ್ಲ'' ಎಂದು ನಾಯಕ ರಾಜೀವ್ ರಾಥೋಡ್ ಹೇಳಿದ್ದಾರೆ.

''ನಾನು ರಾಜೀವ್ ಬಹುದಿನಗಳ ಸ್ನೇಹಿತರು. ಈ ಚಿತ್ರದ ಕಥೆ ಚೆನ್ನಾಗಿದೆ ನೀವು ಒಂದು ಪಾತ್ರ ಮಾಡಬೇಕೆಂದು ಕೇಳಿದ್ದಾರೆ, ನಾನೂ ಸಹ ಸಿನಿಮಾದಲ್ಲಿ ನಟಿಸುತ್ತೇನೆ. ಚಿತ್ರತಂಡಕ್ಕೆ ಶುಭವಾಗಲಿ'' ಎಂದರು ನಟ ಧರ್ಮ.

ಚಿತ್ರದಲ್ಲಿ ಅಭಿನಯಿಸುತ್ತಿರುವ ಪ್ರಭಾಸ್ ರಾಜ್, ಚಂದ್ರಪ್ರಭ, ದೀಪು ವಿಜಯ್, ವರದರಾಜ್, ಉದಯ್, ಮಹಂತೇಶ್, ಆರ್ ಎಂ ಎಂ ಮಂಜು, ನಾಯಕಿಯರಾದ ರಾನ್ವಿ ಶೇಖರ್, ದೀಪ ಈ ಸಮಾರಂಭದಲ್ಲಿ ಹಾಜರಿದ್ದು, ತಮ್ಮ ಅಭಿಪ್ರಾಯ ಹಂಚಿಕೊಂಡರು. ಸಿಂಹ ಮತ್ತು ಪುನೀತ್ ಪಟೇಲ್ ಈ ಚಿತ್ರದ ನಿರ್ಮಾಪಕರು. ಸುಧೀರ್ ಶಾಸ್ತ್ರಿ ಹಾಗೂ ಹದಿನಾಲ್ಕು ವರ್ಷದ ಧ್ರುವ ಈ ಚಿತ್ರದ ಸಂಗೀತ ನಿರ್ದೇಶಕರು. ಪಿ‌.ಎಲ್ ರವಿ ಈ ಚಿತ್ರದ ಛಾಯಾಗ್ರಾಹಕರು.

More from Filmibeat

English summary
Actor Raghavendra Rajkumar sang a new song for Kadak Halli Hudugaru movie. Song is about Kannada and Karnataka.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X