'ರಾಜರಥ' ಚಿತ್ರದ ಎರಡನೇ ಹಾಡು ರಿಲೀಸ್ ಮಾಡಿದ ರಕ್ಷಿತ್ ಶೆಟ್ಟಿ
ಅನೂಪ್ ಭಂಡಾರಿ ನಿರ್ದೇಶನದ ಎರಡನೇ ಸಿನಿಮಾ 'ರಾಜರಥ' ಚಿತ್ರದ ಎರಡನೇ ಹಾಡು ರಿಲೀಸ್ ಆಗಿದೆ. ಈ ಹಾಡನ್ನು ನಟ ರಕ್ಷಿತ್ ಶೆಟ್ಟಿ ಬಿಡುಗಡೆ ಮಾಡಿದ್ದಾರೆ.
'ಹೇಳೆ ಮೇಘವೇ...' ಎಂಬ ಹಾಡು ಇದಾಗಿದೆ. ನಿರ್ದೇಶಕ ಅನೂಪ್ ಭಂಡಾರಿ ಅವರೇ ಈ ಹಾಡಿಗೆ ಸಂಗೀತ ಮತ್ತು ಸಾಹಿತ್ಯ ಬರೆದಿದ್ದಾರೆ. ಹಾಡನ್ನು ಅಭಯ್ ಜೋದ್ಪುರ್ಕರ್ ಹಾಡಿದ್ದಾರೆ. ಮೆಲೋಡಿ ಹಾಡು ಇದಾಗಿದ್ದು, ಕೇಳೋಕ್ಕೆ ಇಂಪಾಗಿದೆ. ಯೂಟ್ಯೂಬ್ ನಲ್ಲಿ ಈಗಾಗಲೇ ಅನೇಕರು ಈ ಹಾಡನ್ನು ಕೇಳಿ ಮೆಚ್ಚುಗೆ ಸೂಚಿಸುತ್ತಿದ್ದಾರೆ.
ಈ ಹಿಂದೆ ಸಿನಿಮಾದ ಟ್ರೇಲರ್ ಅನ್ನು ಪುನೀತ್ ರಾಜ್ ಕುಮಾರ್ ರಿಲೀಸ್ ಮಾಡಿದ್ದರು. ನಂತರ ಮೊದಲ ಹಾಡನ್ನು ಶಿವರಾಜ್ ಕುಮಾರ್ ಬಿಡುಗಡೆ ಮಾಡಿದ್ದರು. ಈಗ ರಕ್ಷಿತ್ ಶೆಟ್ಟಿ ಎರಡನೇ ಹಾಡನ್ನು ಲೋಕಾರ್ಪಣೆ ಮಾಡಿದ್ದಾರೆ.

'ರಾಜರಥ' ಸಿನಿಮಾದಲ್ಲಿ ನಾಯಕ ನಿರೂಪ್ ಭಂಡಾರಿ ಮತ್ತು ನಟಿ ಅವಂತಿಕಾ ಶೆಟ್ಟಿ ಸ್ಟೈಲಿಶ್ ಆಗಿ ಮಿಂಚಿದ್ದಾರೆ. ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಕಾಲಿವುಡ್ ನಟ ಆರ್ಯ ವಿಶೇಷ ಪಾತ್ರ ಮಾಡಿದ್ದಾರೆ. ರವಿಶಂಕರ್ ಲುಕ್ ಗಮನ ಸೆಳೆದಿದೆ. ಕನ್ನಡ ಮತ್ತು ತೆಲುಗು ಎರಡು ಭಾಷೆಯಲ್ಲಿ 'ರಾಜರಥ' ಸಿನಿಮಾ ಬಿಡುಗಡೆಯಾಗಲಿದೆ.


Click it and Unblock the Notifications











