ಬಾಲಿವುಡ್ ನಲ್ಲಿ ಮಿಂಚಲು ಸಜ್ಜಾದ ರಶ್ಮಿಕಾ; ಆದರೆ ಸಿನಿಮಾದಲ್ಲಿ ಅಲ್ಲ

ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಖ್ಯಾತಿ ಗಳಿಸಿರುವ ನಟಿ ರಶ್ಮಿಕಾ ಮಂದಣ್ಣ ಸದ್ಯ ಹಿಂದಿ ಸಿನಿಮಾರಂಗದಲ್ಲಿ ಮಿಂಚಲು ಸಜ್ಜಾಗಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಆದರೆ ಸಿನಿಮಾ ಮೂಲಕ ಅಲ್ಲ ಎನ್ನುವುದು ಇಲ್ಲಿ ಗಮನಿಸಬೇಕು. ಹೌದು, ಆಲ್ಬಂ ಸಾಂಗ್ ಮೂಲಕ ರಶ್ಮಿಕಾ ಬಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ.

ಹಿಂದಿಯ ಖ್ಯಾತ ರ್ಯಾಪರ್ ಬಾದ್ ಷಾ ಹಾಡಿನಲ್ಲಿ ರಶ್ಮಿಕಾ ಹೆಜ್ಜೆ ಹಾಕಲು ಸಜ್ಜಾಗಿದ್ದಾರೆ. ಸಿನಿಮಾ ಮೂಲಕ ಅಭಿಮಾನಿಗಳ ಮನಗೆದ್ದಿರುವ ರಶ್ಮಿಕಾ ಇದೀಗ ಮೊದಲ ಬಾರಿಗೆ ಆಲ್ಬಂ ಹಾಡಿನ ಮೂಲಕ ಮೋಡಿ ಮಾಡಲು ಸಿದ್ಧರಾಗಿದ್ದಾರೆ. ಈಗಾಗಲೇ ಹಾಡಿನ ಪ್ರಕ್ರಿಯೆ ಪ್ರಾರಂಭವಾಗಿದೆ. ಚಂಡೀಗಢದಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ರಾಶ್ಮಿಕಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಆಲ್ಬಂ ಹಾಡು ಬಿಗ್ ಬಜೆಟ್ ನಲ್ಲಿ ತಯಾರಾಗುತ್ತಿದ್ದು, ಹಿಂದಿ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ಯಶ್ ರಾಜ್ ಫಿಲ್ಮ್ಸ್ ನಲ್ಲಿ ನಿರ್ಮಾಣವಾಗುತ್ತಿದೆ. ರಶ್ಮಿಕಾ ಮೊದಲ ಹಿಂದಿ ಆಲ್ಬಂ ಹಾಡು ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ. ಮುಂದಿನ ವರ್ಷ ಈ ಹಾಡು ರಿಲೀಸ್ ಆಗಲಿದೆ.

Rashmika Mandanna to shoot music video with famous rapper Badshah

ಅಂದಹಾಗೆ ರಶ್ಮಿಕಾ ಸದ್ಯ ಪುಷ್ಪಾ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲು ಅರ್ಜುನ್ ಅಭಿನಯದ ಈ ಸಿನಿಮಾದಲ್ಲಿ ರಶ್ಮಿಕಾ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಜೊತೆಗೆ ತೆಲುಗಿನ ಮತ್ತೊಂದು ಸಿನಿಮಾ ರಶ್ಮಿಕಾ ಕೈಯಲ್ಲಿದೆ. ಜೊತೆಗೆ ತಮಿಳು ಮತ್ತು ಕನ್ನಡದ ಒಂದೊಂದು ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.

More from Filmibeat

English summary
Actress Rashmika Mandanna to shoot music video with famous rapper Badshah.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X