ಫೆಬ್ರವರಿ 20 ರಂದು ರಾಬರ್ಟ್ ಚಿತ್ರದ ಹೊಸ ಹಾಡು ರಿಲೀಸ್
ನಟ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಮಾರ್ಚ್ 11 ರಂದು ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಡಿ ಬಾಸ್ ಸಿನಿಮಾ ರಿಲೀಸ್ ಆಗುತ್ತಿದ್ದು, ಕ್ರೇಜ್ ಹೆಚ್ಚಿದೆ.
ಇತ್ತೀಚಿಗಷ್ಟೆ ರಾಬರ್ಟ್ ಚಿತ್ರದ ಟ್ರೈಲರ್ ರಿಲೀಸ್ ಆಗಿ ಭರ್ಜರಿ ರೆಸ್‌ಪಾನ್ಸ್ ಪಡೆದುಕೊಂಡಿದೆ. ಫೆಬ್ರವರಿ 16 ರಂದು ದರ್ಶನ್ ಬರ್ತಡೇ ಪ್ರಯುಕ್ತ ರಾಬರ್ಟ್ ಟ್ರೈಲರ್ ಬಿಡುಗಡೆಯಾಗಿದ್ದು, 7 ಮಿಲಿಯನ್ ವೀಕ್ಷಣೆ ಕಂಡಿದೆ.
ಇದೀಗ, ರಾಬರ್ಟ್ ಚಿತ್ರದ ಹೊಸ ಹಾಡು ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ತರುಣ್ ಸುಧೀರ್ ಮಾಹಿತಿ ನೀಡಿದ್ದಾರೆ. ರಾಬರ್ಟ್ ಚಿತ್ರದ 'ಬಾ ಬಾ ಬಾ ನಾ ರೆಡಿ' ಹಾಗೂ 'ಜೈ ಶ್ರೀರಾಮ್' ಹಾಡುಗಳು ಸೂಪರ್ ಹಿಟ್ ಆಗಿವೆ. ಈಗ ಮೂರನೇ ಹಾಡು ರಿಲೀಸ್ ಮಾಡಲಾಗುತ್ತಿದೆ.

ಫೆಬ್ರವರಿ 20 ರಂದು ಸಂಜೆ 4.05 ನಿಮಿಷಕ್ಕೆ 'ಕಣ್ಣು ಹೊಡೆಯೋಕಾ.....' ಎಂಬ ಹಾಡಿನ ಲಿರಿಕಲ್ ವಿಡಿಯೋ ಬರಲಿದೆ. ಇದು ದರ್ಶನ್ ಮತ್ತು ನಟಿ ಆಶಾ ಭಟ್ ನಡುವಿನ ಡ್ಯುಯೆಟ್ ಹಾಡಾಗಿದೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಈ ಹಾಡು ಮೂಡಿಬರಲಿದೆ.
ಇನ್ನುಳಿದಂತೆ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ತರುಣ್ ಸುಧೀರ್ ನಿರ್ದೇಶನ ಮಾಡಿದ್ದು, ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಿಸಿದ್ದಾರೆ. ಜಗಪತಿ ಬಾಬು, ವಿನೋದ್ ಪ್ರಭಾಕರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.


Click it and Unblock the Notifications











