ಪುಷ್ಪ ಚಿತ್ರತಂಡದಿಂದ ರಶ್ಮಿಕಾ ಫ್ಯಾನ್ಸ್‌ಗೆ ಮತ್ತೊಂದು ಸರ್ಪ್ರೈಸ್

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ತೆರೆಗೆ ಬರಲಿದೆ. ಎರಡು ಭಾಗಗಳಾಗಿ ತಯಾರಾಗುತ್ತಿರುವ ಈ ಚಿತ್ರದ ಮೊದಲ ಭಾಗ ಡಿಸೆಂಬರ್ 17 ರಂದು ರಿಲೀಸ್ ಆಗುತ್ತಿದೆ.

ಪುಷ್ಪ ಚಿತ್ರದ ಮೊದಲ ಹಾಡು ದೊಡ್ಡ ಮಟ್ಟದಲ್ಲಿ ಹಿಟ್ ಆಗಿದೆ. ಈಗ ಎರಡನೇ ಹಾಡಿನ ಸಮಯ. ಈ ಹಾಡು ನಾಯಕಿ ನಟಿಯ ಮೇಲೆ ರಚನೆಯಾಗಿರುವುದು ವಿಶೇಷ. ಅಂದ್ರೆ ಪುಷ್ಪ ಚಿತ್ರದ ನಾಯಕಿ ರಶ್ಮಿಕಾ ಮಂದಣ್ಣ ಅಭಿನಯಿಸಿರುವ 'ಶ್ರೀವಲ್ಲಿ' ಪಾತ್ರ ಸುತ್ತ ಈ ಸಾಂಗ್ ಮೂಡಿಬಂದಿದೆ.

ಪುಷ್ಪ ಸಿನಿಮಾದ ಎರಡನೇ ಹಾಡು ಅಕ್ಟೋಬರ್ 13 ರಂದು ರಿಲೀಸ್ ಆಗುತ್ತಿದೆ. ದೇವಿಶ್ರೀ ಪ್ರಸಾದ್ ಮ್ಯೂಸಿಕ್ ಕಂಪೋಸ್ ಮಾಡಿದ್ದು, ಐದು ಭಾಷೆಯಲ್ಲಿ ಹಾಡು ಬರಲಿದೆ.

Second single Srivalli from Pushpa on October 13th

ಇತ್ತೀಚಿಗಷ್ಟೆ ರಶ್ಮಿಕಾ ಮಂದಣ್ಣ ಫಸ್ಟ್ ಲುಕ್ ಪೋಸ್ಟರ್ ಅನಾವರಣಗೊಂಡಿತ್ತು. ಪುಷ್ಪ ಚಿತ್ರದಲ್ಲಿ ರಶ್ಮಿಕಾ ಶ್ರೀವಲ್ಲಿ ಎಂಬ ಪಾತ್ರ ಮಾಡ್ತಿರುವುದಾಗಿ ಅಧಿಕೃತವಾಗಿ ಪ್ರಕಟಿಸಿದ್ದರು. ಈಗ ಶ್ರೀವಲ್ಲಿ ಹೆಸರಿನಲ್ಲಿಯೇ ಹಾಡು ಬಿಡುಗಡೆ ಮಾಡುತ್ತಿರುವುದು ಕೊಡಗಿನ ಸುಂದರಿ ಅಭಿಮಾನಿಗಳಿಗೆ ಖುಷಿ ತಂದಿದೆ.

ಆಗಸ್ಟ್ 13 ರಂದು ಪುಷ್ಪ ಸಿನಿಮಾದ ಮೊದಲ ಹಾಡು 'ದಾಕೋ ದಾಕೋ ಮೇಕಾ....' ಹಾಡು ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿತ್ತು. ಇದುವರೆಗೂ ತೆಲುಗು ಹಾಡು 59 ಮಿಲಿಯನ್ ವೀಕ್ಷಣೆ ಕಂಡಿದೆ. ತಮಿಳು, ಹಿಂದಿ, ಮಲಯಾಳಂ ಹಾಗೂ ಕನ್ನಡ ಭಾಷೆಯಲ್ಲಿ ಈ ಹಾಡು ಪ್ರತ್ಯೇಕವಾಗಿ ರಿಲೀಸ್ ಆಗಿತ್ತು. ಕನ್ನಡದಲ್ಲಿ ಈ ಹಾಡನ್ನು ವಿಜಯ ಪ್ರಕಾಶ್ ಹಾಡಿದ್ದರು.

ಸುಕುಮಾರ್ ನಿರ್ದೇಶನದಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ಅಲ್ಲು ಅರ್ಜುನ್ ನಾಯಕನಾಗಿ ನಟಿಸಿದ್ದಾರೆ. ಪುಷ್ಪರಾಜ್ ಎಂಬ ಪಾತ್ರದಲ್ಲಿ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಕಾಣಿಸಿಕೊಳ್ಳುತ್ತಿದ್ದು, ಎರಡು ಭಾಗಗಳಾಗಿ ಸಿನಿಮಾ ಪ್ರೇಕ್ಷಕರೆದುರು ಬರಲಿದೆ. ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದು, ಅಲ್ಲು ಅರ್ಜುನ್ ಜೊತೆ ಮಲಯಾಳಂ ಖ್ಯಾತ ನಟ ಫಾಹದ್ ಫಾಸಿಲ್ ಹಾಗೂ ಕನ್ನಡದ ಡಾಲಿ ಧನಂಜಯ್ ಸಹ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಬಾಲಿವುಡ್‌ನಲ್ಲಿ ರಶ್ಮಿಕಾ ಮಂದಣ್ಣ

ಪುಷ್ಪ ಸಿನಿಮಾದಲ್ಲಿ ನಟಿಸುತ್ತಲೇ ಆ ಕಡೆ ಬಾಲಿವುಡ್‌ನಲ್ಲೂ ಎರಡು ಚಿತ್ರ ಮಾಡಿ ಮುಗಿಸಿದ್ದಾರೆ. ಶಾಂತನು ಬಾಗ್ಚಿ ನಿರ್ದೇಶನದಲ್ಲಿ ತಯಾರಾಗುತ್ತಿರುವ 'ಮಿಷನ್ ಮಜ್ನು' ಚಿತ್ರದೊಂದಿಗೆ ರಶ್ಮಿಕಾ ಬಾಲಿವುಡ್ ಪ್ರವೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ಸಿದ್ದಾರ್ಥ್ ಮಲ್ಹೋತ್ರಾ ರಾ ಏಜೆಂಟ್ ಆಗಿ ಕಾಣಿಸಿಕೊಂಡಿದ್ದು, ಇದುವರೆಗೂ ರಶ್ಮಿಕಾ ಮಂದಣ್ಣ ಪಾತ್ರ ಏನು ಎನ್ನುವುದು ಬಹಿರಂಗವಾಗಿಲ್ಲ. ರೋನಿ ಸ್ಕ್ರೂವಾಲಾ, ಅಮರ್ ಬುಟಾಲಾ ಮತ್ತು ಗರಿಮಾ ಮೆಹ್ತಾ ಈ ಚಿತ್ರ ನಿರ್ಮಿಸಿದ್ದಾರೆ. 1970ರ ನೈಜ ಘಟನೆಗಳಿಂದ ಸ್ಫೂರ್ತಿಯಿಂದ ಈ ಸಿನಿಮಾ ತಯಾರಾಗಿದೆ.

ಇದರ ಜೊತೆಗೆ ಅಮಿತಾಭ್ ಬಚ್ಚನ್ ನಟಿಸಿರುವ ಗುಡ್‌ಬೈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದರು. ಈ ಸಿನಿಮಾದ ಶೂಟಿಂಗ್ ಸಹ ಮುಗಿಸಿದ್ದಾರೆ ಎಂಬ ಮಾಹಿತಿ ಇದೆ. ಈ ಕಡೆ ಪುಷ್ಪ ಚಿತ್ರದಲ್ಲಿ ನಟಿಸುತ್ತಲೇ ಆ ಕಡೆ ಎರಡು ಹಿಂದಿ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ ರಶ್ಮಿಕಾ ಮಂದಣ್ಣ.

ಪುಷ್ಪ ಮುಗಿಯುತ್ತಿದ್ದಂತೆ ನಿರ್ದೇಶಕ ಕೊರಟಲಾ ಶಿವ ಜೊತೆ 21ನೇ ಚಿತ್ರಕ್ಕೆ ಚಾಲನೆ ಕೊಡಲಿದ್ದಾರೆ. ಅಲ್ಲು ಅರ್ಜುನ್ ಮತ್ತು ಕೊರಟಲಾ ಶಿವ ಕಾಂಬಿನೇಷನ್ ಸಿನಿಮಾ ಅಧಿಕೃತವಾಗಿ ಘೋಷಣೆಯಾಗಿದೆ. ಇದೇ ಮೊದಲ ಸಲ ಕೊರಟಲಾ ಶಿವ ಚಿತ್ರದಲ್ಲಿ ಅಲ್ಲು ಅರ್ಜುನ್ ನಟಿಸುತ್ತಿದ್ದಾರೆ. ಮರ್ಚಿ, ಶ್ರೀಮಂತಡು, ಜನತಾ ಗ್ಯಾರೇಜ್, ಭರತ್ ಅನೇ ನೇನು ಈಗ ಮೆಗಾಸ್ಟಾರ್ ಜೊತೆ ಆಚಾರ್ಯ ಸಿನಿಮಾ ಮಾಡ್ತಿದ್ದಾರೆ ನಿರ್ದೇಶಕ ಶಿವ.

More from Filmibeat

English summary
Allu Arjun and Rashmika Mandanna starrer Pushpa movie second song will be release on October 13th.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X