For Quick Alerts
  ALLOW NOTIFICATIONS  
  For Daily Alerts

  ಕೆ ಮಂಜು ಪುತ್ರ ರಾಣಾನ ಸಾಂಗ್ ರಿಲೀಸ್ ಮಾಡಿದ ಜೋಗಿ ಪ್ರೇಮ್!

  |

  ಸ್ಯಾಂಡಲ್‌ವುಡ್‌ನ ಹಿರಿಯ ನಿರ್ಮಾಪಕ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ನಟಿಸಿರುವ ಹೊಸ ಸಿನಿಮಾ ರಾಣ. ಈ ಸಿನಿಮಾವನ್ನು ನಂದಕಿಶೋರ್ ನಿರ್ದೇಶನ ಮಾಡಿದ್ದು, ಈ ಸಿನಿಮಾದ 'ಗಲ್ಲಿ ಬಾಯ್' ಹಾಡನ್ನು ನಿರ್ದೇಶಕ-ನಟ ಜೋಗಿ ಪ್ರೇಮ್ ಬಿಡುಗಡೆ ಮಾಡಿದ್ದಾರೆ.

  ಚಂದನ್ ಶೆಟ್ಟಿ ಈ ಹಾಡನ್ನು ಬರೆದು ಸಂಗೀತ ನೀಡಿದ್ದಾರೆ. ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಈ ಸಾಂಗ್ ಅನ್ನು ಹಾಡಿದ್ದಾರೆ. ಶ್ರೇಯಸ್ ಹಾಗೂ ರೀಷ್ಮಾ ನಾಣಯ್ಯ ಇಬ್ಬರೂ ಹೆಜ್ಜೆ ಹಾಕಿರುವ ಈ ಹಾಡು ತುಂಬಾ ಚೆನ್ನಾಗಿ ಮೂಡಿಬಂದಿದೆ.

  "ಮೊದಲು ನಾನು, ನನ್ನ ಸ್ಪೂರ್ತಿಯಾದ ವಿಷ್ಣುವರ್ಧನ್ ಹಾಗೂ ಅಪ್ಪು ಅವರನ್ನು ನೆನಪಿಸಿಕೊಳ್ಳುತ್ತೇನೆ. ಚಂದನ್ ಶೆಟ್ಟಿ ಎಲ್ಲರ ಮನಸಿಗೆ ಹತ್ತಿರವಾಗುವಂತಹ ಸಾಹಿತ್ಯ ಬರೆದಿದ್ದಾರೆ. ಅಷ್ಟೇ ಚೆನ್ನಾಗಿ ಸಂಗೀತ ನೀಡಿದ್ದಾರೆ. ಅನಿರುಧ್ದ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಅವರ ಅದ್ಭುತ ಗಾಯನ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ರೀಷ್ಮಾ ನಾಣಯ್ಯ ಒಳ್ಳೆಯ ನೃತ್ಯಗಾರ್ತಿ. ನೃತ್ಯ ನಿರ್ದೇಶಕ ಇಮ್ರಾನ್ ಮಾಸ್ಟರ್ ಹಾಗೂ ಛಾಯಾಗ್ರಾಹಕ ಶೇಖರ್ ಚಂದ್ರ ಅವರ ಕಾರ್ಯವೈಖರಿ ಚೆನ್ನಾಗಿದೆ. ನಾನು ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಅಭಿನಯಿಸಿದ್ದೇನೆ. ನವೆಂಬರ್11 ರಂದು ಚಿತ್ರ ತೆರೆಗೆ ಬರಲಿದೆ.‌ ಹಾಡು ಬಿಡುಗಡೆ ಮಾಡಿಕೊಟ್ಟ ಪ್ರೇಮ್ ಅವರಿಗೆ ಹಾಗೂ ಅವಕಾಶ ನೀಡಿರುವ ನಿರ್ಮಾಪಕ ಪುರುಷೋತ್ತಮ್ ಹಾಗೂ ನಿರ್ದೇಶಕ ನಂದಕಿಶೋರ್ ಅವರಿಗೆ ಧನ್ಯವಾದ" ಎನ್ನುತ್ತಾರೆ ಹೀರೊ ಶ್ರೇಯಸ್.

  'ರಾಣ' ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಈ ಹಾಡುಗಳಂತೂ ಸಖತಾಗಿದೆ. ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಬರೆದಿರುವ ಈ ಹಾಡು ಎಲ್ಲರ ಗಮನ ಸೆಳೆಯುತ್ತಿದೆ. ಈ ಹಾಡಿನಲ್ಲಿ ಹೆಜ್ಜೆ ಹಾಕಿದ್ದು ಖುಷಿ ಕೊಟ್ಟಿದೆ ಎನ್ನುತ್ತಾರೆ" ಹೀರೊಯಿನ್ ರೀಷ್ಮಾ ನಾಣಯ್ಯ.

  'ರಾಣ' ಒಂದೊಳ್ಳೆಯ ಕೌಟುಂಬಿಕ ಚಿತ್ರ. ಹಳ್ಳಿಯಿಂದ ನಗರಕ್ಕೆ ಬಂದು ನೆಲೆಸಿರುವವರ ಕುರಿತಾದ ಕಥೆ. ನಂದಕಿಶೋರ್ ನಿರ್ದೇಶನ, ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಸೇರಿದಂತೆ ಎಲ್ಲರ ಕೆಲಸ ಚೆನ್ನಾಗಿದೆ. ನವೆಂಬರ್ 11 ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ." ಎಂದು ಹಿರಿಯ ನಿರ್ಮಾಪಕ ಕೆ.ಮಂಜು ರಿವೀಲ್ ಮಾಡಿದ್ದಾರೆ.

  Shreyas Manju Starrer Raana Movie Song Gully Boy Released By Jogi Prem

  ಹಾಡು ಬಿಡುಗಡೆ ಮಾಡಿದ ಜೋಗಿ ಪ್ರೇಮ್‌ಗೆ ನಿರ್ದೇಶಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ. 'ರಾಣ‌' ಸಿನಿಮಾ ನವೆಂಬರ್ 11 ಬಿಡುಗಡೆಯಾಗಲಿದ್ದು, ತಂಡದರೆಲ್ಲಾ ಸೇರಿ ಉತ್ತಮ ಸಿನಿಮಾ ಮಾಡಿದ್ದೇವೆಎಂದು ನಿರ್ದೇಶಕ ನಂದಕಿಶೋರ್ ಭರವಸೆ ನೀಡಿದ್ದಾರೆ. ಅಂದ್ಹಾಗೆ ಈ ಸಿನಿಮಾದಲ್ಲಿ ಕೋಟೆ ಪ್ರಭಾಕರ್, ಅಶೋಕ್ , ರಘು ಹಾಗೂ ಗಾಯಕ ಅನಿರುದ್ಧ್ ಶಾಸ್ತ್ರಿ ಸಿನಿಮಾ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ.

  English summary
  Shreyas Manju Starrer Raana Movie Song Gully Boy Released By Jogi Prem
  Wednesday, September 21, 2022, 23:34
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X