Don't Miss!
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರುತಿ ಪ್ರಕಾಶ್ ಹಾಡು ಕೇಳಿ ಯುವರಸಿಕರ ಮನಸ್ಸು ತನನಂ ತನನಂ
ಬಿಗ್ ಬಾಸ್ ಖ್ಯಾತಿಯ ಶ್ರುತಿ ಪ್ರಕಾಶ್ ಅಭಿನಯದ ಚೊಚ್ಚಲ ಸಿನಿಮಾ 'ಲಂಡನ್ ನಲ್ಲಿ ಲಂಬೋದರ' ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ. ಈಗಾಗಲೇ ಟ್ರೈಲರ್ ಮತ್ತು ಹಾಡುಗಳ ಮೂಲಕ ಕುತೂಹಲ ಮೂಡಿಸಿರುವ ಈ ಸಿನಿಮಾ ಇದೀಗ ಶ್ರುತಿ ಪ್ರಕಾಶ್ ಹಾಡಿರುವ ಹಾಡಿನ ಮೂಲಕ ಗಮನ ಸೆಳೆಯುತ್ತಿದೆ.
ಬಿಗ್ ಬಾಸ್ ನಲ್ಲಿ ಉತ್ತಮವಾಗಿ ಆಟವಾಡಿ ಜನರ ಮನಸ್ಸು ಗೆದ್ದಿದ್ದ ಶ್ರುತಿ ಮೂಲತಃ ಗಾಯಕಿಯಾಗಿ ಗುರುತಿಸಿಕೊಂಡಿದ್ದರು. ಮುಂಬೈನಲ್ಲಿ ಕೆಲವು ಆಲ್ಬಂಗಳಿಗೆ ಧ್ವನಿಯಾಗಿದ್ದ ಶ್ರುತಿ ಈಗ ತಮ್ಮದೇ ಸಿನಿಮಾದಲ್ಲಿ ಹಾಡಿದ್ದಾರೆ. ಈ ಹಾಡು ರಿಲೀಸ್ ಆಗಿದ್ದು ಯುವರಸಿಕರ ಮನದಲ್ಲಿ ಕಚಗುಳಿಯಿಡುತ್ತಿದೆ.
ಮಾರ್ಚ್ 2ಕ್ಕೆ ಶ್ರುತಿ ಪ್ರಕಾಶ್ ಕೊಡ್ತಾರೆ ಸರ್ಪ್ರೈಸ್
'ಈ ಮನಸೆ.....' ಎಂಬ ರೋಮ್ಯಾಂಟಿಕ್ ಸಾಲುಗಳಿಗೆ ಶ್ರುತಿ ಪ್ರಕಾಶ್ ಮತ್ತು ದೀಪಕ್ ದೊಡ್ಡೇರಾ ಧ್ವನಿಯಾಗಿದ್ದಾರೆ. ಪ್ರಣಾವ್ ಅಯ್ಯಂಗರ್ ಈ ಹಾಡಿಗೆ ಸಾಹಿತ್ಯ ಬರೆದಿದ್ದು ಜೊತೆಗೆ ಸಂಗೀತ ನಿರ್ದೇಶನ ಕೂಡ ಮಾಡಿದ್ದಾರೆ.
ಮಾರ್ಚ್ 2 ರಂದು ತೆರೆಕಂಡಿದ್ದ ಈ ಹಾಡು ಯೂಟ್ಯೂಬ್ ನಲ್ಲಿ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿದೆ. ಇನ್ನುಳಿದಂತೆ ರಾಜ್ ಸೂರ್ಯ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಲಂಡನ್ ಸ್ಕ್ರೀನ್ಸ್ ಸಂಸ್ಥೆಯಡಿ ಲಂಡನ್ನಲ್ಲಿ ಅನಿವಾಸಿ ಭಾರತೀಯ ಸ್ನೇಹಿತರೆಲ್ಲ ಸೇರಿ ಚಿತ್ರ ನಿರ್ಮಾಣ ಮಾಡಿದ್ದಾರೆ.