ಮದುವೆಯಾದ 2 ತಿಂಗಳೊಳಗೆ ಸಿಹಿ ಸುದ್ದಿ ಹಂಚಿಕೊಂಡ 'ಕೆಜಿಎಫ್' ಗಾಯಕಿ ನೇಹಾ

ಬಾಲಿವುಡ್ ನ ಖ್ಯಾತ ಗಾಯಕಿ ನೇಹಾ ಕಕ್ಕರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಎರಡು ತಿಂಗಳಾಗಿದೆ. ಪ್ರಿಯತಮ ರೋಹನ್ ಪ್ರೀತ್ ಸಿಂಗ್ ಜೊತೆ ನೇಹಾ ಸಪ್ತಪದಿ ತುಳಿದಿದ್ದಾರೆ. ಅಕ್ಟೋಬರ್ 25ರಂದು ನೇಹಾ ಮತ್ತು ರೋಹನ್ ಪ್ರೀತ್ ಸಿಂಗ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮದುವೆಯಾಗಿ ಎರಡು ತಿಂಗಳೊಳಗೆ ಗಾಯಕಿ ನೇಹಾ ಕಕ್ಕರ್ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಹೌದು, ನೇಹಾ ಗರ್ಭಿಣಿ ಆಗಿರುವ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಪತಿ ರೋಹನ್ ಪ್ರೀತ್ ಸಿಂಗ್ ಜೊತೆ ನಿಂತು ಬೇಬಿ ಬಂಪ್ ಫೋಟೋವನ್ನು ಶೇರ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

ನೇಹಾ ಕಕ್ಕರ್ ದಂಪತಿಗೆ ಅಭಿಮಾನಿಗಳು ಮತ್ತು ಸ್ನೇಹಿತರು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಈ ಪೋಸ್ಟ್ ಗೆ ಪತಿ ರೋಹನ್ ಪ್ರೀತ್ ಸಿಂಗ್ ನೇಹಾಳನ್ನು ಹೆಚ್ಚು ಕಾಳಜಿ ವಹಿಸಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಅಂದಹಾಗೆ ನೇಹಾ ಸದ್ಯ ಸಿಂಗಿಂಗ್ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

Singer Neha kakkar announces her pregnancy by sharing a photo of baby bump

ಗಾಯಕಿ ನೇಹಾ ಕಕ್ಕರ್, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾದ ಹಿಂದಿ ಹಾಡಿಗೆ ಧ್ವನಿಯಾಗಿದ್ದಾರೆ. ಇನ್ನೂ ದಿಲ್ಬರ್ ರಿಡಕ್ಸ್, ಕಲಾ ಚಸ್ಮಾ, ಆಂಖ್ ಮಾರೆ ಸೇರಿದಂತೆ ಸೂಪರ್ ಹಿಟ್ ಹಾಡುಗಳನ್ನು ಹಾಡಿದ್ದಾರೆ. ರೋಹನ್ ಪ್ರೀತ್ ಸಿಂಗ್ ಸಹ ಗಾಯಕರಾಗಿದ್ದಾರೆ. ಜೊತೆಗೆ ರಿಯಾಲಿಟಿ ಶೋಗಳನ್ನು ನಡೆಸಿಕೊಡುತ್ತಿದ್ದಾರೆ.

More from Filmibeat

English summary
Singer Neha kakkar announces her pregnancy by sharing a photo of baby bump.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X