'ಹೊಂದಿಸಿ ಬರೆಯಿರಿ' ಸಿನಿಮಾದ ಹಾಡು ರಿಲೀಸ್ ಮಾಡಿದ ನಿರ್ದೇಶಕ ಯೋಗರಾಜ್ ಭಟ್!
'ಹೊಂದಿಸಿ ಬರೆಯಿರಿ' ಸಿನಿಮಾ ಟೈಟಲ್‌ನಿಂದಲೇ ಗಮನ ಸೆಳೆಯುತ್ತಿದೆ. ಈಗಾಲೇ ಸಿನಿಮಾ ಟೀಸರ್ ಹಾಗೂ ಹಾಡುಗಳಿಂದ ಗಮನ ಸೆಳೆಯುತ್ತಿದೆ. ಈಗ ಮತ್ತೊಂದು ಹಾಡನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿ ನಿಂತಿದೆ. ಅದುವೇ 'ನೀ ಇರದ ನಾಳೆ'.
'ಹೊಂದಿಸಿ ಬರೆಯಿರಿ' ಮತ್ತೊಂದು ಬಹು ನಿರೀಕ್ಷಿತ ಹಾಡು 'ನೀ ಇರದ ನಾಳೆ' ಲಿರಿಕಲ್ ಸಾಂಗ್ ಅನ್ನು ಸಿನಿಮಾ ತಂಡ ರಿಲೀಸ್ ಮಾಡಿದೆ. ಸ್ಯಾಂಡಲ್‌ವುಡ್‌ನ ವಿಕಟ ಕವಿ, ನಿರ್ದೇಶಕ ಯೋಗರಾಜ್ ಭಟ್ ಈ ಹಾಡನ್ನು ರಿಲೀಸ್ ಮಾಡಿ ಶುಭ ಕೋರಿದ್ದಾರೆ.

ಈ ಸಿನಿಮಾದಲ್ಲಿ ಒಟ್ಟು ಎಂಟು ಹಾಡುಗಳಿವೆ. ಒಂದೊಂದು ಹಾಡು ಸಿನಿಮಾದ ಕಥೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈಗಾಗಲೇ ಮೂರು ಹಾಡುಗಳನ್ನು ಸಂಗೀತ ಪ್ರಿಯರ ಮನಗೆದ್ದಿದೆ. ಈಗ 'ನೀ ಇರದ ನಾಳೆ ಬೇಕಿಲ್ಲ ನನಗೆ..' ಅನ್ನೋ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದೆ. ಈ ಹಾಡಿಗೆ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಅವರೇ ಸಾಹಿತ್ಯ ಬರೆದಿದ್ದಾರೆ. ಅಂದ್ಹಾಗೆ ಈ ಹಾಡು ಸಂಬಂಧಗಳಲ್ಲಿರುವ ಗೊಂದಲಗಳನ್ನು ವ್ಯಕ್ತಪಡಿಸುವ ಹಾಡಾಗಿದೆ. ಈ ಹಾಡಿನಲ್ಲಿ ಪ್ರವೀಣ್ ತೇಜ್ ಹಾಗೂ ಭಾವನ ರಾವ್ ಕಾಣಿಸಿಕೊಳ್ಳುತ್ತಿದ್ದಾರೆ.
'ಹೊಂದಿಸಿ ಬರೆಯಿರಿ' ಸಿನಿಮಾದಲ್ಲಿ ಪ್ರವೀಣ್ ತೇಜ್, ಭಾವನಾ ರಾವ್, ಸಂಯುಕ್ತ ಹೊರನಾಡು, ಐಶಾನಿ ಶೆಟ್ಟಿ, ನವೀನ್ ಶಂಕರ್, ಶ್ರೀ ಮಹದೇವ್, ಅರ್ಚನಾ ಜೋಯಿಸ್, ಅನಿರುದ್ಧ್ ಆಚಾರ್ಯ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇವರೊಂದಿಗೆ ಸುನೀಲ್ ಪುರಾಣಿಕ್, ಪ್ರವೀಣ್ ಡಿ ರಾವ್, ಧರ್ಮೇಂದ್ರ ಅರಸ್, ನಂಜುಂಡೇ ಗೌಡ, ಸುಧಾ ನರಸಿಂಹರಾಜು ಕೂಡ ನಟಿಸಿದ್ದಾರೆ.

ಈ ಸಿನಿಮಾದಲ್ಲಿ ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಸಾಗುವ ಬದುಕಿನ ಪಯಣವೇ ಜೀವನ ಅನ್ನುವುದೇ ಕಥೆ. ಜೋ ಕೋಸ್ಟ ಸಂಗೀತ ನೀಡಿದ್ದಾರೆ. ಕೆ ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಸಾಹಿತ್ಯ ಬರೆದಿದ್ದಾರೆ. ಟಗರು ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ರಾಮೇನಹಳ್ಳಿ ಜಗನ್ನಾಥ್ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.


Click it and Unblock the Notifications











