ಸಂಗೀತ ಮಾಂತ್ರಿಕ ಇಳಯರಾಜಗೆ ಪತ್ನಿ ವಿಯೋಗ

By Rajendra

Ilayaraja wife Jeeva
ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರಗಳ ಸಂಗೀತ ಮಾಂತ್ರಿಕ ಇಳಯರಾಜ ಅವರ ಪತ್ನಿ ಜೀವಾ (60) ವಿಧಿವಶರಾಗಿದ್ದಾರೆ. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಜೀವಾ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚೆನ್ನೈನ ಅಪೊಲೋ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಅವರು ಇಹಲೋಹ ತ್ಯಜಿಸಿದ್ದಾರೆ. ಅವರು ಪತಿ ಇಳಯರಾಜ, ಮಕ್ಕಳಾದ ಯುವನ್ ಶಂಕರ್ ರಾಜ್ ಕಾರ್ತಿಕ್ ರಾಜ ಹಾಗೂ ಮಗಳು ಭಾವತರಣಿ ಅವರನ್ನು ಅಗಲಿದ್ದಾರೆ.

ತಮಿಳುನಾಡು ರಾಜ್ಯಪಾಲ ಕೆ ರೋಶಯ್ಯ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಜೀವಾ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಐದು ವರ್ಷಗಳಿಂದ ಹಿಂದೆ ಜೀವಾ ಅವರು ಬೈಪಾಸ್ ಸರ್ಜರಿಗೆ ಒಳಗಾಗಿದ್ದರು. ಚೆನ್ನೈನ ಟಿ ನಗರದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವರ ಪಾರ್ಥೀವ ಶರೀರವನ್ನು ಇಡಲಾಗಿದೆ. (ಏಜೆನ್ಸೀಸ್)

More from Filmibeat

English summary
Music maestro Ilayaraja’s wife Jeeva passed away Saturday night following cardiac arrest. She had complained of chest pain and was rushed to Apollo Hospital, where doctors declared she was brought dead.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X