»   » ಪಾರ್ವತಮ್ಮ ಮನೆಗೆ ಸಚಿವ ಜನಾರ್ದನ ರೆಡ್ಡಿ ಭೇಟಿ

ಪಾರ್ವತಮ್ಮ ಮನೆಗೆ ಸಚಿವ ಜನಾರ್ದನ ರೆಡ್ಡಿ ಭೇಟಿ

Posted By:
Subscribe to Filmibeat Kannada

ರಾಜ್ಯ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಇಂದು (ಆ.3) ಕನ್ನಡದ ಹಿರಿಯ ಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರನ್ನು ಭೇಟಿ ಮಾಡಿದರು. ಬಳ್ಳಾರಿಯಲ್ಲಿ ನಿರ್ಮಿಸಲಾಗಿರುವ ವರನಟ ಡಾ.ರಾಜ್ ಕುಮಾರ್ ಅವರ ಪುತ್ಥಳಿಯನ್ನು ಅನಾವರಣಸುವಂತೆ ಅವರಲ್ಲಿ ಮನವಿ ಮಾಡಿಕೊಂಡರು.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿತ್ರೀಕರಣದಲ್ಲಿ ಬಿಜಿಯಾಗಿದ್ದಾರೆ. ಅವರು ಹಿಂತಿರುಗಿದ ಬಳಿಕ ಅವರೊಂದಿಗೆ ಚರ್ಚಿಸಿ ಪುತ್ಥಳಿ ಬಿಡುಗಡೆ ಮಾಡುವ ದಿನಾಂಕವನ್ನು ನಿಗದಿಪಡಿಸುವುದಾಗಿ ಪಾರ್ವತಮ್ಮ ಹೇಳಿದ್ದಾಗಿ ಜನಾರ್ದನ ರೆಡ್ಡಿ ತಿಳಿಸಿದರು.

ನಟ ರಾಘವೇಂದ್ರ ರಾಜ್ ಕುಮಾರ್ ಮಾತನಾಡುತ್ತಾ, ಶಿವಣ್ಣ ಮತ್ತು ಪುನೀತ್ ಇಬ್ಬರೂ ಬಿಜಿಯಾಗಿದ್ದಾರೆ. ಬಹುಶಃ ಇನ್ನೊಂದು ತಿಂಗಳಲ್ಲಿ ಅಣ್ಣಾವ್ರ ಪುತ್ಥಳಿ ಬಳ್ಳಾರಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಗಣೇಶ ಚತುರ್ಥಿಯ ಬಳಿಕ ಪುತ್ಥಳಿ ಅನಾವರಣದ ದಿನಾಂಕ ತಿಳಿಸಲಾಗುತ್ತದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಪತ್ರಕರ್ತ ರವಿ ಬೆಳಗೆರೆಯವರು ಉಪಸ್ಥಿತರಿದ್ದರು.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada